
Mandya District Ayush Office Recruitment 2025 : ಜಿಲ್ಲಾ ಆಯುಷ್ ಕಛೇರಿಯಿಂದ ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ಆಯುರ್ವೇದ ತಜ್ಞ ವೈದ್ಯರು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Mandya District Ayush Office Recruitment 2025 : Details of Vacancies
ಹುದ್ದೆ : ಆಯುರ್ವೇದ ತಜ್ಞ ವೈದ್ಯರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಂಡ್ಯ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಶೈಕ್ಷಣಿಕ ಅರ್ಹತೆ : ಆಯುರ್ವೇದದಲ್ಲಿ ಸ್ನಾತಕೋತ್ತರ (ಕಾಯಚಿಕಿತ್ಸಾ, ಪಂಚಕರ್ಮ ಮತ್ತು ಶಲ್ಯ ವಿಭಾಗದಲ್ಲಿ) ಪದವಿ ಹೊಂದಿರಬೇಕು.
ಉದ್ಯೋಗ ಮಾಹಿತಿ : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ನೇಮಕಾತಿ 2025
ವಯೋಮಿತಿ : ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳು – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂ, ಪ್ರ1ರ ಅಭ್ಯರ್ಥಿಗಳು – ಗರಿಷ್ಠ 40 ವರ್ಷ
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 52,550+5,000 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಮೆರಿಟ್, ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ), ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಗೆ ನೋಂದಾಯಿತ ಅಂಚೆ ಮೂಲಕ ಕಳುಹಿಸಿ.
ಅರ್ಜಿ ನಮೂನೆ ದೊರೆಯುವ & ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಆಯುಷ್ ಕಛೇರಿ, ಮಂಡ್ಯ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ನಮೂನೆ ಪಡೆಯಲು ಪ್ರಾರಂಭದ ದಿನಾಂಕ : ಏಪ್ರಿಲ್ 16, 2025
ಅರ್ಜಿ ನಮೂನೆ ಪಡೆಯಲು ಕೊನೆಯ ದಿನಾಂಕ : ಏಪ್ರಿಲ್ 28, 2025
ಭರ್ತಿ ಮಾಡಿದ ಅರ್ಜಿ ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ : ಮೇ 02, 2025
Mandya District Ayush Office Recruitment 2025 : Important Links
NOTIFICATION | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.