Mandya Zilla Panchayat Recruitment 2022 : ಮಂಡ್ಯ ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Mandya Zilla Panchayat Recruitment 2022 : Details of Vacancies
ಹುದ್ದೆ :
1) ತಾಂತ್ರಿಕ ಸಹಾಯಕರು (ಅರಣ್ಯ)
ಶೈಕ್ಷಣಿಕ ಅರ್ಹತೆ – ಬಿ.ಎಸ್ಸಿ (Forestry) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
2) ತಾಂತ್ರಿಕ ಸಹಾಯಕರು (ತೋಟಗಾರಿಕೆ)
ಶೈಕ್ಷಣಿಕ ಅರ್ಹತೆ – ಬಿ.ಎಸ್ಸಿ (Hort) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
3) ತಾಲ್ಲೂಕು ಐ.ಇ.ಸಿ. ಸಂಯೋಜಕರು
ಶೈಕ್ಷಣಿಕ ಅರ್ಹತೆ – ಸ್ನಾತಕೋತ್ತರ ಪದವಿ (Mass Communication) ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
4) ಆಡಳಿತ ಸಹಾಯಕರು
ಶೈಕ್ಷಣಿಕ ಅರ್ಹತೆ – ಬಿ.ಕಾಂ ಪದವಿ ಜೊತೆಗೆ ಕನ್ನಡ & ಇಂಗ್ಲಿಷ್ ಟೈಪಿಂಗ್ ಪರಿಣಿತಿ ಹೊಂದಿರಬೇಕು ಹಾಗೂ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಂಡ್ಯ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 13 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವಯೋಮಾನ |
ತಾಂತ್ರಿಕ ಸಹಾಯಕರು (ಅರಣ್ಯ) | 03 | 21-40 ವರ್ಷ |
ತಾಂತ್ರಿಕ ಸಹಾಯಕರು (ತೋಟಗಾರಿಕೆ) | 01 | 21-40 ವರ್ಷ |
ತಾಲ್ಲೂಕು ಐ.ಇ.ಸಿ ಸಂಯೋಜಕರು | 02 | 21-45 ವರ್ಷ |
ಆಡಳಿತ ಸಹಾಯಕರು | 07 | 21-35 ವರ್ಷ |
ವೇತನ : ಆಡಳಿತ ಸಹಾಯಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾರ್ಮಿಕ ಇಲಾಖೆಯು ತಾಲೂಕು ಮಟ್ಟದಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವೇತನ ನೀಡಲಾಗುತ್ತದೆ. ಉಳಿದ ಹುದ್ದೆಗಳಿಗೆ ಮಾಸಿಕ ರೂ. 24,000 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಹೊರಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಆಡಳಿತ ಸಹಾಯಕ ಹುದ್ದೆಗೆ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಮತ್ತು ಕನ್ನಡ ಹಾಗೂ ಇಂಗ್ಲೀಷ್ ಟೈಪಿಂಗ್ ಬಗ್ಗೆ ಪ್ರಾಯೋಗಿಕ ಪರೀಕ್ಷೆ ನಡೆಸಲಾಗುವುದು.
ಅನುಭವ (ಇದ್ದಲ್ಲಿ) : ತಾಂತ್ರಿಕ ಸಹಾಯಕರು (ಅರಣ್ಯ, ತೋಟಗಾರಿಕೆ) ಹಾಗೂ ತಾಲ್ಲೂಕು ಐ.ಇ.ಸಿ ಸಂಯೋಜಕರು ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
ಉದ್ಯೋಗ ಮಾಹಿತಿ : K.E.B ನೇಮಕಾತಿ 2022
ಮಂಡ್ಯ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಜಿಲ್ಲಾ ಪಂಚಾಯತದ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಫೆಬ್ರವರಿ 03, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಫೆಬ್ರವರಿ 17, 2022
Mandya Zilla Panchayat Recruitment 2022 : Important Links
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.