
MCC Bank Recruitment 2025 – Mangalore Catholic Cooperative Bank Recruitment 2025 : ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ ನಿ., ಮಂಗಳೂರು ಇಲ್ಲಿ ಖಾಲಿ ಇರುವ ಹಿರಿಯ ಸಹಾಯಕ ಹಾಗೂ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
MCC Bank Recruitment 2025 : Details of Vacancies
ಹುದ್ದೆ : ಹಿರಿಯ ಸಹಾಯಕ, ಕಿರಿಯ ಸಹಾಯಕ
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಮಂಗಳೂರು, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ಹಿರಿಯ ಸಹಾಯಕ | 2 |
ಕಿರಿಯ ಸಹಾಯಕ | 8 |
ಶೈಕ್ಷಣಿಕ ಅರ್ಹತೆ : ಯಾವುದೇ ಪದವಿ ಹೊಂದಿರಬೇಕು (ಬಿಎಸ್ಸಿ/ ಬಿಎ/ ಬಿಕಾಂ/ ಎಂಕಾಂ/ ಬಿಇ/ ಬಿಬಿಎಮ್/ ಬಿಸಿಎ/ ಎಂಸಿಎ, ಇತ್ಯಾದಿ). ಕನ್ನಡದಲ್ಲಿ ವ್ಯವಹಾರ ಜ್ಞಾನ, ಸ್ಪಷ್ಟವಾಗಿ ಓದಲು ಮತ್ತು ಬರೆಯಲು ಬರಬೇಕು ಹಾಗೂ ಕಂಪ್ಯೂಟರ್ನಲ್ಲಿ ಅಗತ್ಯ ಪರಿಣತಿ ಹೊಂದಿರಬೇಕು.
ಉದ್ಯೋಗ ಮಾಹಿತಿ : ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ 2025
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನ :
ಹುದ್ದೆ | ವೇತನ |
ಹಿರಿಯ ಸಹಾಯಕ | 21,600 – 40,050 |
ಕಿರಿಯ ಸಹಾಯಕ | 20,000 – 36,300 |
ಅನುಭವ : ಹಿರಿಯ ಸಹಾಯಕ ಹುದ್ದೆಗೆ ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡಿದವರಿಗೆ ಆದ್ಯತೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇತ್ತೀಚಿನ ಮಾಹಿತಿ ಮತ್ತು ತಂತ್ರಜ್ಞಾನದ ಅನುಭವವಿರತಕ್ಕದ್ದು.
ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2025
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗಳು ಅರ್ಜಿ ಶುಲ್ಕದ ಡಿಡಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಕೊರಿಯರ್ ಅಥವಾ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಮಹಾಪ್ರಬಂಧಕರು, ಮಂಗಳೂರು ಕಥೋಲಿಕ್ ಕೋಆಪರೇಟಿವ್ ಬ್ಯಾಂಕ್ ನಿ., ಆಡಳಿತ ಕಛೇರಿ, ಎರಡನೇ ಮಹಡಿ, ಹಂಪನಕಟ್ಟ, ಮಂಗಳೂರು – 575001
ನಿಗದಿತ ಅರ್ಜಿ ಶುಲ್ಕದ ವಿವರ :
• ಪ.ಜಾತಿ/ ಪ.ಪಂ./ ಪ್ರ1ರ ಅಭ್ಯರ್ಥಿಗಳು – ರೂ. 500
• ಉಳಿದ ಅಭ್ಯರ್ಥಿಗಳು – ರೂ. 1000
ಶುಲ್ಕ ಪಾವತಿಸುವ ವಿಧಾನ : ಅರ್ಜಿ ಶುಲ್ಕವನ್ನು ಮಂಗಳೂರು ಕಥೋಲಿಕ್ ಕೋಆಪರೇಟಿವ್ ಬ್ಯಾಂಕ್ ನಿ., ಇವರ ಹೆಸರಿಗೆ ಡಿಡಿ ಮುಖಾಂತರ ಪಾವತಿಸತಕ್ಕದ್ದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 26, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 09, 2025
MCC Bank Recruitment 2025 : Important Links
NOTIFICATION | CLICK HERE |
APPLICATION FORM | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.