MESCOM Recruitment 2021 : 200 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

MESCOM Recruitment 2021 : ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

MESCOM Recruitment 2021 : Details of Vacancies

ಹುದ್ದೆ : ಗ್ರ್ಯಾಜುಯೆಟ್ ಅಪ್ರೆಂಟಿಸ್, ಟೆಕ್ನೀಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 200 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಗ್ರ್ಯಾಜುಯೆಟ್ ಅಪ್ರೆಂಟಿಸ್125
ಟೆಕ್ನೀಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್75

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಇಂಜಿನಿಯರಿಂಗ್/ಡಿಪ್ಲೋಮಾ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 5,000 ರಿಂದ ರೂ. 7,000 ವರೆಗೂ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಹಾಗೂ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಭಾರತೀಯ ತೈಲ ನಿಗಮದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 19, 2021
NATS ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 05, 2021
ಮೆಸ್ಕಾಂ ವೆಬ್‌ಸೈಟ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 09, 2021
ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ದಿನಾಂಕ : ಸೆಪ್ಟೆಂಬರ್ 14, 2021
ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲೆಗಳ ಪರಿಶೀಲನೆ ದಿನಾಂಕ : ಸೆಪ್ಟೆಂಬರ್ 21, 2021 ರಿಂದ ಸೆಪ್ಟೆಂಬರ್ 23, 2021ರವರೆಗೆ

MESCOM Recruitment 2021 : Important Links

ಅಧಿಸೂಚನೆ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.