Mysore Zilla Panchayat Recruitment 2022 – Apply Online for 36 Technical Coordinator, Technical Assistant, Administrative Assistant Posts

Mysore Zilla Panchayat Recruitment 2022 : ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಸಂಸ್ಥೆಯ ಮೂಲಕ ನೇಮಕಾತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Mysore Zilla Panchayat Recruitment 2022 : Details of Vacancies

ಹುದ್ದೆ :
1) ತಾಂತ್ರಿಕ ಸಹಾಯಕ ಅಭಿಯಂತರರು – 04 ಹುದ್ದೆ
ಬಿ.ಇ (ಸಿವಿಲ್) ಶೈಕ್ಷಣಿಕ ಅರ್ಹತೆ ಜೊತೆಗೆ ಗಣಕಯಂತ್ರ ಜ್ಞಾನ ಹೊಂದಿರಬೇಕು.

2) ತಾಂತ್ರಿಕ ಸಂಯೋಜಕರು – 02 ಹುದ್ದೆ
ಬಿ.ಇ (ಸಿವಿಲ್) ಶೈಕ್ಷಣಿಕ ಅರ್ಹತೆ ಜೊತೆಗೆ ಗಣಕಯಂತ್ರ ಜ್ಞಾನ ಹೊಂದಿರಬೇಕು.

3) ಮಾಹಿತಿ ಶಿಕ್ಷಣ ಸಂವಹನ ಸಂಯೋಜಕರು – 01 ಹುದ್ದೆ
ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

4) ತಾಂತ್ರಿಕ ಸಹಾಯಕರು (ಕೃಷಿ ಇಲಾಖೆ) – 04 ಹುದ್ದೆ
ಬಿ.ಎಸ್ಸಿ (ಕೃಷಿ) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

5) ತಾಂತ್ರಿಕ ಸಹಾಯಕರು (ತೋಟಗಾರಿಕೆ ಇಲಾಖೆ) – 10 ಹುದ್ದೆ
ಬಿ.ಎಸ್ಸಿ (ತೋಟಗಾರಿಕೆ) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

6) ತಾಂತ್ರಿಕ ಸಹಾಯಕರು (ಅರಣ್ಯ ಇಲಾಖೆ) – 06 ಹುದ್ದೆ
ಬಿ.ಎಸ್ಸಿ (ಅರಣ್ಯ) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

7) ತಾಂತ್ರಿಕ ಸಹಾಯಕರು (ರೇಷ್ಮೆ ಇಲಾಖೆ) – 01 ಹುದ್ದೆ
ಬಿ.ಎಸ್ಸಿ (ರೇಷ್ಮೆ) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

8) ಆಡಳಿತ ಸಹಾಯಕರು – 08 ಹುದ್ದೆ
ಬಿ.ಕಾಂ ಪದವೀಧರರಾಗಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು. MS Word, Excel, PowerPoint ರಲ್ಲಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮೈಸೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 36 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಉದ್ಯೋಗ ಮಾಹಿತಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನೇಮಕಾತಿ 2022

ಆಯ್ಕೆ ವಿಧಾನ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ, ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಹೊಂದಿದ ಅಂಕಗಳು ಹಾಗೂ ಅನುಭವದ ಆಧಾರದ ಮೇಲೆ ಹುದ್ದೆಗೆ ಆಯ್ಕೆ ಮಾಡಲಾಗುವುದು.

ವೇತನ :

ಹುದ್ದೆವೇತನ
ತಾಂತ್ರಿಕ ಸಹಾಯಕ ಅಭಿಯಂತರರು 24,000
ತಾಂತ್ರಿಕ ಸಂಯೋಜಕರು 29,000
ಮಾಹಿತಿ ಶಿಕ್ಷಣ ಸಂವಹನ ಸಂಯೋಜಕರು 24,000
ತಾಂತ್ರಿಕ ಸಹಾಯಕರು (ಕೃಷಿ)24,000
ತಾಂತ್ರಿಕ ಸಹಾಯಕರು (ತೋಟಗಾರಿಕೆ)24,000
ತಾಂತ್ರಿಕ ಸಹಾಯಕರು (ಅರಣ್ಯ)24,000
ತಾಂತ್ರಿಕ ಸಹಾಯಕರು (ರೇಷ್ಮೆ)24,000
ಆಡಳಿತ ಸಹಾಯಕರು 17,600

ವಯೋಮಾನ : ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 15, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 30, 2022

Mysore Zilla Panchayat Recruitment 2022 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗೆ (ಮೊ) – 9980001309 ಸಂಪರ್ಕಿಸಬಹುದು

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment