ನಬಾರ್ಡ್‌ನಿಂದ ಆಫೀಸ್ ಅಟೆಂಡೆಂಟ್ ಹುದ್ದೆಗೆ ಅರ್ಜಿ ಆಹ್ವಾನ – NABARD Recruitment 2024

NABARD Recruitment 2024 : ನ್ಯಾಷನಲ್ ಬ್ಯಾಂಕ್‌ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ – ನಬಾರ್ಡ್‌ನಿಂದ ಆಫೀಸ್ ಅಟೆಂಡೆಂಟ್ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

NABARD Recruitment 2024 : Details of Vacancies

ಹುದ್ದೆ : ಆಫೀಸ್ ಅಟೆಂಡೆಂಟ್ (ಗ್ರೂಪ್-ಸಿ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 108 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 8 ಹುದ್ದೆಗಳು ಖಾಲಿ ಇದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಲ್ಲಿ ಟಿಕೆಟ್ ಸೂಪರ್ವೈಸರ್, ಸ್ಟೇಷನ್ ಮಾಸ್ಟರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ದಿನಾಂಕ 01/10/2024ಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,000 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ, ಭಾಷಾ ಪ್ರಾವೀಣ್ಯತೆ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು. ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳು – ಬೆಂಗಳೂರು, ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ ಧಾರವಾಡ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ.

ನಬಾರ್ಡ್‌ನಿಂದ ಆಫೀಸ್ ಅಟೆಂಡೆಂಟ್ ಹುದ್ದೆಗೆ ಅರ್ಜಿ ಆಹ್ವಾನ - NABARD Recruitment 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ರೂ. 50
• ಉಳಿದ ಅಭ್ಯರ್ಥಿಗಳಿಗೆ – ರೂ. 500

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 02, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 21, 2024
ಆನ್‌ಲೈನ್‌ ಪರೀಕ್ಷಾ ದಿನಾಂಕ : ನವೆಂಬರ್ 21, 2024

NABARD Office Attendant Recruitment 2024 : Important Links

DETAILED NOTIFICATIONCLICK HERE
SHORT NOTIFICATION CLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment