ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಹುದ್ದೆಗಳ ನೇಮಕಾತಿ 2026 – NHM Dakshina Kannada Recruitment 2026

NHM Dakshina Kannada Recruitment 2026

NHM Dakshina Kannada Recruitment 2026 : ದಕ್ಷಿಣ ಕನ್ನಡ ಜಿಲ್ಲೆಗೆ ರಾಷ್ಟ್ರೀಯ ಆರೋಗ್ಯ ಅಭಿಯಾನ/ ಪಿಎಂ ಅಭೀಮ್ ಕಾರ್ಯಕ್ರಮದಡಿಯಲ್ಲಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಫಾರ್ಮಸಿಸ್ಟ್, ಪ್ರಯೋಗಶಾಲಾ ತಂತ್ರಜ್ಞರು, ಆರೋಗ್ಯ ನಿರೀಕ್ಷಣಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

NHM Dakshina Kannada Recruitment 2026 : Details of Vacancies

ಹುದ್ದೆ :

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಎನ್.ಯು.ಹೆಚ್.ಎಂ), ಫಾರ್ಮಸಿಸ್ಟ್ (ಎನ್.ಯು.ಹೆಚ್.ಎಂ), ಪ್ರಯೋಗಶಾಲಾ ತಂತ್ರಜ್ಞರು (ನಮ್ಮ ಕ್ಲಿನಿಕ್), ಆರೋಗ್ಯ ನಿರೀಕ್ಷಣಾಧಿಕಾರಿ (ಎನ್.ಯು.ಹೆಚ್.ಎಂ)

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 6 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಎನ್.ಯು.ಹೆಚ್.ಎಂ)1
ಫಾರ್ಮಸಿಸ್ಟ್ (ಎನ್.ಯು.ಹೆಚ್.ಎಂ)2
ಪ್ರಯೋಗಶಾಲಾ ತಂತ್ರಜ್ಞರು (ನಮ್ಮ ಕ್ಲಿನಿಕ್)2
ಆರೋಗ್ಯ ನಿರೀಕ್ಷಣಾಧಿಕಾರಿ (ಎನ್.ಯು.ಹೆಚ್.ಎಂ)1

ಶೈಕ್ಷಣಿಕ ಅರ್ಹತೆ :

  • ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ – ಕಿ.ಮ.ಆ.ಸ ತರಬೇತಿಯನ್ನು ಕರ್ನಾಟಕ ಸರಕಾರದ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಪಡೆದಿರಬೇಕು ಮತ್ತು ಕರ್ನಾಟಕ ನರ್ಸಿಂಗ್ ಕೌನ್ಸಿಲನಲ್ಲಿ ನೋಂದಾವಣಿಯಾಗಿರಬೇಕು.
  • ಫಾರ್ಮಸಿಸ್ಟ್ – ಬಿ-ಫಾರ್ಮಾ/ ಡಿ-ಫಾರ್ಮಾ ಕೋರ್ಸ್ ಅನ್ನು ಕರ್ನಾಟಕ ಸರಕಾರದ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಪಡೆದಿರಬೇಕು ಮತ್ತು ಪ್ಯಾರಾ ಮೆಡಿಕಲ್ ಬೋರ್ಡನಲ್ಲಿ ನೋಂದಾವಣಿಯಾಗಿರಬೇಕು.
  • ಪ್ರಯೋಗಶಾಲಾ ತಂತ್ರಜ್ಞರು – ಬಿ.ಎಸ್ಸಿ ಎಂ.ಎಲ್.ಟಿ/ ಡಿ.ಎಂ.ಎಲ್.ಟಿ ಕೋರ್ಸ್ ಉತ್ತೀರ್ಣರಾಗಿರಬೇಕು ಹಾಗೂ ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿಯ ನೋಂದಣಿ ಹೊಂದಿರಬೇಕು.
  • ಆರೋಗ್ಯ ನಿರೀಕ್ಷಣಾಧಿಕಾರಿ – ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿಧೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿಯನ್ನು ಪಡೆದಿರಬೇಕು. ಅಥವಾ ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ಅರೆವೈದ್ಯಕೀಯ ಮಂಡಳಿ ನಡೆಸುವ 03 ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೊಮಾ ಹೊಂದಿರಬೇಕು. ಅಥವಾ ಪಿ.ಯು.ಸಿ (ವಿಜ್ಞಾನ) ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ಅರೆವೈದ್ಯಕೀಯ ಮಂಡಳಿ ನಡೆಸುವ 02 ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೊಮಾ ಹೊಂದಿರಬೇಕು.

ಉದ್ಯೋಗ ಮಾಹಿತಿ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2026

ವಯೋಮಾನ :

ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ :

ಹುದ್ದೆವೇತನ
ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಎನ್.ಯು.ಹೆಚ್.ಎಂ)ರೂ. 18,766
ಫಾರ್ಮಸಿಸ್ಟ್ (ಎನ್.ಯು.ಹೆಚ್.ಎಂ)ರೂ. 16,067 – ರೂ. 18,940
ಪ್ರಯೋಗಶಾಲಾ ತಂತ್ರಜ್ಞರು (ನಮ್ಮ ಕ್ಲಿನಿಕ್)ರೂ. 16,067
ಆರೋಗ್ಯ ನಿರೀಕ್ಷಣಾಧಿಕಾರಿ (ಎನ್.ಯು.ಹೆಚ್.ಎಂ)ರೂ. 18,766

ಆಯ್ಕೆ ವಿಧಾನ :

ಮೆರಿಟ್ ಕಂ ರೋಸ್ಟರ್ ಆಧಾರದಲ್ಲಿ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ದಕ್ಷಿಣ ಕನ್ನಡ, ಮಂಗಳೂರು

ನಿಗದಿತ ಅರ್ಜಿ ಶುಲ್ಕದ ವಿವರ :

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 10, 2026
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 20, 2026

NHM Dakshina Kannada Recruitment 2026 : Important Links

NOTIFICATION & APPLICATION FORM CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment