NHM Karnataka CHO Recruitment 2022 – Apply Online for 1048 Posts

NHM Karnataka CHO Recruitment 2022 : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ಸಮುದಾಯ ಆರೋಗ್ಯ ಅಧಿಕಾರಿಗಳು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

NHM Karnataka CHO Recruitment 2022 : Details of Vacancies

ಹುದ್ದೆ : ಸಮುದಾಯ ಆರೋಗ್ಯ ಅಧಿಕಾರಿಗಳು (ಸಿ.ಹೆಚ್.ಓ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1048 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಕನಿಷ್ಠ ಬಿ.ಎಸ್ಸಿ ನರ್ಸಿಂಗ್/ಪೋಸ್ಟ್ ಬೇಸಿಕ್ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಅಥವಾ ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನ ಮಾನ್ಯತೆ ಪಡೆದ ಸಂಸ್ಥೆಯಿಂದ ಸಮಾನಾಂತರ ವಿದ್ಯಾರ್ಹತೆಯನ್ನು ಪಡೆದ ನೋಂದಾಯಿತ ಶುಶ್ರೂಷಕರಾಗಿರಬೇಕು.

ವಯೋಮಾನ :
• ಪ. ಜಾತಿ, ಪ. ಪಂಗಡ, ಪ್ರವರ್ಗ 1 ಅಭ್ಯರ್ಥಿಗಳು – ಗರಿಷ್ಠ 40 ವರ್ಷ
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳು – ಗರಿಷ್ಠ 35 ವರ್ಷ.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 22,000 ರಿಂದ ರೂ. 24,200 ವೇತನ ನೀಡಲಾಗುವುದು. ಜೊತೆಗೆ ಹೆಚ್ಚುವರಿಯಾಗಿ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹ ಧನ ರೂ. 8,000 ವರೆಗೆ ನೀಡಲಾಗುವುದು.

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಪ. ಜಾತಿ, ಪ. ಪಂಗಡದ ಅಭ್ಯರ್ಥಿಗಳು ರೂ. 255
• ಉಳಿದ ಅಭ್ಯರ್ಥಿಗಳು ರೂ. 510

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಇತರೆ ಮಾಹಿತಿ : ಸಮುದಾಯ ಆರೋಗ್ಯ ಅಧಿಕಾರಿಗಳು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ನಿವಾಸಿಯಾಗಿರಬೇಕು (ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 10 ವರ್ಷಗಳ ನಿವಾಸಿಯಾಗಿರುವುದಕ್ಕೆ ನಿವಾಸಿ ಪ್ರಮಾಣ ಪತ್ರವನ್ನು ದಾಖಲೆ ಪತ್ರಗಳ ಪರಿಶೀಲನೆಯ ಸಂದರ್ಭದಲ್ಲಿ ಹಾಜರುಪಡಿಸುವುದು) ಮತ್ತು ಕನ್ನಡ ಮಾತನಾಡಲು, ಓದಲು ಮತ್ತು ಬರೆಯಲು ಬರಬೇಕು. ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 27, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 08, 2022 ನವೆಂಬರ್ 25, 2022
ಪ್ರವೇಶಪತ್ರ ಪ್ರಕಟ ದಿನಾಂಕ : ಡಿಸೆಂಬರ್ 05, 2022

NHM Karnataka CHO Recruitment 2022 : Important Links

Notification Click Here
Circular Click Here
Date Extention Notification Click Here
Apply Online Click Here

ಜಿಲ್ಲಾವಾರು ಖಾಲಿ ಇರುವ ಹುದ್ದೆಗಳ ವಿವರ :

NHM Karnataka CHO Recruitment 2022 – Apply Online for 1048 Posts

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment