NHM Koppal Recruitment 2023 – Apply for 4 Medical Officer and RBSK Medical Officer Posts

NHM Koppal Recruitment 2023 : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ (ಎನ್.ಹೆಚ್.ಎಂ) ಕೊಪ್ಪಳ ಜಿಲ್ಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

NHM Koppal Recruitment 2023 : Details of Vacancies

ಹುದ್ದೆ : ಆಯುಷ್ ವೈದ್ಯಾಧಿಕಾರಿಗಳು, ಆರ್.ಬಿ.ಎಸ್.ಕೆ ಆಯುಷ್ ವೈದ್ಯಾಧಿಕಾರಿಗಳು.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 4 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಆಯುಷ್ ವೈದ್ಯಾಧಿಕಾರಿಗಳು325000
ಆರ್.ಬಿ.ಎಸ್.ಕೆ ಆಯುಷ್ ವೈದ್ಯಾಧಿಕಾರಿಗಳು125000

ಶೈಕ್ಷಣಿಕ ಅರ್ಹತೆ :
• ಆಯುಷ್ ವೈದ್ಯಾಧಿಕಾರಿಗಳು – ಬಿ.ಎ.ಎಂ.ಎಸ್/ಬಿ.ಹೆಚ್.ಎಂ.ಎಸ್/ಬಿ.ಎನ್.ವೈ.ಎಸ್/ಬಿ.ಯು.ಎಂ.ಎಸ್/ ಸಿದ್ದ ವೈದ್ಯ ಪದ್ಧತಿಯಲ್ಲಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕಡ್ಡಾಯವಾಗಿ ಹೌಸ್‌ಮನ್‌ಶಿಫ್‌ನ್ನು ಮುಗಿಸಿರಬೇಕು. ಅಂಗೀಕೃತ ನೊಂದಣಿ ಪ್ರಾಧಿಕಾರದಿಂದ ವೃತ್ತಿ ನೋಂದಣಿಯನ್ನು ಮಾಡಿಕೊಂಡಿರಬೇಕು.

• ಆರ್.ಬಿ.ಎಸ್.ಕೆ ಆಯುಷ್ ವೈದ್ಯಾಧಿಕಾರಿಗಳು – ಬಿ.ಎ.ಎಂ.ಎಸ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಅನುಭವ – ಪಬ್ಲಿಕ್ ಹೆಲ್ತ್/ ಗವರ್ನಮೆಂಟ್ ಹೆಲ್ತ್ ಪ್ರೋಗ್ರಾಮ್ ಅಥವಾ ಎನ್.ಜಿ.ಓ ದಲ್ಲಿ 2 ವರ್ಷಗಳ ಅನುಭವ ಹೊಂದಿರಬೇಕು.

ವಯೋಮಾನ : ದಿನಾಂಕ 22/04/2023ಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಆಯುಷ್ ವೈದ್ಯಾಧಿಕಾರಿಗಳು – ಗರಿಷ್ಠ 60 ವರ್ಷ
• ಆರ್.ಬಿ.ಎಸ್.ಕೆ ಆಯುಷ್ ವೈದ್ಯಾಧಿಕಾರಿಗಳು – ಗರಿಷ್ಠ 45 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳು ಆಯುಷ್ ಪದವಿಯಲ್ಲಿ ಒಟ್ಟು ಗಳಿಸಿದ ಶೇಕಡಾವಾರುವಿನ ಅರ್ಧ ಮತ್ತು ಇದರ ಜೊತೆಗೆ ಸೇವಾನುಭವವಿರುವ ಶೇಕಡಾವಾರನ್ನು ಸೇರಿಸಿ ಲೆಕ್ಕಾಚಾರ ಮಾಡಿ ಮೆರಿಟ್ ಕಮ್ ರೋಸ್ಟರ್ ಪ್ರಕಾರ ಪಟ್ಟಿಯನ್ನು ತಯಾರಿಸಲಾಗುವುದು.

ಉದ್ಯೋಗ ಮಾಹಿತಿ : ಹಾಲು ಉತ್ಪಾದಕರ ಒಕ್ಕೂಟದಲ್ಲಿ ನೇಮಕಾತಿ 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 23, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 22, 2023

NHM Koppal Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment