ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ 2024 – NIACL Assistants Recruitment 2024

NIACL Assistants Recruitment 2024 : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಅಗತ್ಯ ಇರುವ ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

NIACL Assistants Recruitment 2024 : Details of Vacancies

ಹುದ್ದೆ : ಅಸಿಸ್ಟಂಟ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 300 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ದಕ್ಷಿಣ ರೈಲ್ವೆ ನೇಮಕಾತಿ 2024

ವಯೋಮಿತಿ : ದಿನಾಂಕ 01 ಜನವರಿ 2024ಕ್ಕೆ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 22,405 ರಿಂದ ರೂ. 62,265 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಆನ್‌ಲೈನ್‌ ಪರೀಕ್ಷೆ (ಪ್ರಿಲಿಮಿನರಿ ಮತ್ತು ಮುಖ್ಯ ಪರೀಕ್ಷೆ) ನಡೆಸಲಾಗುವುದು. ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಪ್ರಾದೇಶಿಕ ಭಾಷಾ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳು : ಕರ್ನಾಟಕದಲ್ಲಿ ಬೆಳಗಾವಿ, ಬೆಂಗಳೂರು, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳು – ರೂ. 100
• ಉಳಿದ ಅಭ್ಯರ್ಥಿಗಳು – ರೂ. 850

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಫೆಬ್ರವರಿ 01, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಫೆಬ್ರವರಿ 15, 2024
ಪ್ರಿಲಿಮಿನರಿ ಪರೀಕ್ಷೆ ದಿನಾಂಕ : ಮಾರ್ಚ್ 02, 2024

NIACL Assistants Recruitment 2024 : Important Links

NOTIFICATION CLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment