ಕೋಲಾರ ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿಗಳ ಕಛೇರಿಯಲ್ಲಿ ನೇಮಕಾತಿ 2023 – NMHP Kolar Recruitment 2023

NMHP Kolar Recruitment 2023 : ಕೋಲಾರ ಜಿಲ್ಲೆಯಲ್ಲಿ ಜಿಲ್ಲಾ ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಮನೋವೈದ್ಯಕೀಯ ಶುಶ್ರೂಷಕರ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

NMHP Kolar Recruitment 2023 : Details of Vacancies

ಹುದ್ದೆ : ಮನೋವೈದ್ಯಕೀಯ ಶುಶ್ರೂಷಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೋಲಾರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ : ಬಿಎಸ್ಸಿ ನರ್ಸಿಂಗ್ ಅಥವಾ ಕರ್ನಾಟಕ ನರ್ಸಿಂಗ್ ಕೌನ್ಸಿಲ್ ಆಫ್ ಇಂಡಿಯಾದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ತತ್ಸಮಾನ ಪದವಿ, ಈ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದರೆ ಜನರಲ್ ನರ್ಸಿಂಗ್‌ನ್ನು ಪರಿಗಣಿಸಬಹುದು, ಇದರೊಂದಿಗೆ ಮನೋವೈದ್ಯಕೀಯ/ ಮಾನಸಿಕ ಆರೋಗ್ಯ ಸಂಸ್ಥೆ/ ಆಸ್ಪತ್ರೆಯಲ್ಲಿ ಕನಿಷ್ಠ 2 ವರ್ಷಗಳ ಕೆಲಸ ಮಾಡಿದ ಅನುಭವ.
ಅಪೇಕ್ಷಣೀಯ : ನರ್ಸಿಂಗ್ ಕೌನ್ಸಿಲ್ ಆಫ್ ಇಂಡಿಯಾದಿಂದ ಗುರುತಿಸಲ್ಪಟ್ಟ ಸಂಸ್ಥೆಯಿಂದ ಮನೋವೈದ್ಯಕೀಯ ಶುಶೂಷೆಯಲ್ಲಿ ಸ್ನಾತಕೋತ್ತರ ಡಿಪ್ಲೊಮಾ.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 14,000 ರಂತೆ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ದಾಖಲೆಗಳ ಪರಿಶೀಲನೆ ಮತ್ತು ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ವಾಕ್‌ಇನ್‌ಇಂಟರ್‌ವ್ಯೂ ಮೂಲಕ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಹಂತ 1 : ಅಭ್ಯರ್ಥಿಯು ವಾಕ್‌ಇನ್‌ಇಂಟರ್‌ವ್ಯೂಗೆ ಹಾಜರಾಗುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಹಂತ 2 : ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಮೂಲ ದಾಖಲಾತಿಗೂಂದಿಗೆ 1 ಸೆಟ್ ದೃಢೀಕರಣ ಪತ್ರ, 2 ಪಾಸ್‌ಪೋರ್ಟ್ ಭಾವಚಿತ್ರದೊಂದಿಗೆ (ವಿದ್ಯಾರ್ಹತೆ, ಗ್ರಾಮೀಣ, ಕನ್ನಡ ಮಾದ್ಯಮ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅಂಗವಿಕಲ, ಇತರೆ ಮೂಲ ಮತ್ತು ನಕಲು ದಾಖಲಾತಿಗಳೊಂದಿಗೆ) ಈ ಕೆಳಗಡೆ ನೀಡಲಾಗಿರುವ ಕಛೇರಿಯ ವಿಳಾಸಕ್ಕೆ ಹಾಜರಾಗಬೇಕು.

ಸಂದರ್ಶನ ಸ್ಥಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಕೆ.ಎನ್.ಟಿ.ಬಿ. ಸ್ಯಾನಿಟೋರಿಯಂ ಆವರಣ, ಬಂಗಾರಪೇಟೆ ರಸ್ತೆ, ಕೋಲಾರ.

ಸಂದರ್ಶನ ನಡೆಯುವ ದಿನಾಂಕದ ವಿವರ :
ನೇರ ಸಂದರ್ಶನ ನಡೆಯುವ ದಿನಾಂಕ : ಜೂನ್ 05, 2023 ರಂದು ಬೆಳಿಗ್ಗೆ 10.00 ಗಂಟೆಗೆ

NMHP Kolar Recruitment 2023 : Important Links

NOTIFICATIONCLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment