NTPC Limited Recruitment 2021 : ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ ಖಾಲಿಯಿರುವ ಅಸಿಸ್ಟೆಂಟ್ ಇಂಜಿನಿಯರ್ ಹಾಗೂ ಅಸಿಸ್ಟೆಂಟ್ ಕೆಮಿಸ್ಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
NTPC Limited Recruitment 2021 : Details of Vacancies
ಹುದ್ದೆ : ಅಸಿಸ್ಟೆಂಟ್ ಇಂಜಿನಿಯರ್ – 200 ಹುದ್ದೆ, ಅಸಿಸ್ಟೆಂಟ್ ಕೆಮಿಸ್ಟ್ – 30
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 230 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
• ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಗಳಿಂದ ಕನಿಷ್ಠ 60% ಅಂಕಗಳೊಂದಿಗೆ ಎಲೆಕ್ಟ್ರಿಕಲ್/ ಮೆಕ್ಯಾನಿಕಲ್/ ಎಲೆಕ್ಟ್ರಾನಿಕ್ಸ್/ ಇನ್ಸ್ಟ್ರುಮೆಂಟೇಷನ್ ಎಂಜಿನಿಯರಿಂಗ್ ಪದವಿ ಪಡೆದಿರಬೇಕು
• ಅಸಿಸ್ಟೆಂಟ್ ಕೆಮಿಸ್ಟ್ ಹುದ್ದೆಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 60% ಅಂಕಗಳೊಂದಿಗೆ ರಸಾಯನಶಾಸ್ತ್ರದಲ್ಲಿ ಎಂ.ಎಸ್ಸಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000 ರಿಂದ ರೂ. 1,20,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ
ವಯೋಮಾನ : ಅಭ್ಯರ್ಥಿಗಳು ಗರಿಷ್ಠ 30 ವರ್ಷ ಪೂರೈಸಿರಬೇಕು. ಅದರಲ್ಲಿ,
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ
ಆಯ್ಕೆ ವಿಧಾನ : Online Written Test (Knowledge Test & Aptitude Test) ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಉದ್ಯೋಗ ಮಾಹಿತಿ : Tumkur District Court Recruitment 2021 : 21 ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಶನ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಒಬಿಸಿ ಅಭ್ಯರ್ಥಿಗಳು ರೂ. 300
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ಇಲ್ಲ
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಎಸ್.ಬಿ.ಐ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 24, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 10, 2021
NTPC Limited Recruitment 2021 : Important Links
ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.