NWKRTC Haveri Division Recruitment 2022 – Apply Online for 62 Apprentice Posts

NWKRTC Haveri Division Recruitment 2022 : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

NWKRTC Haveri Division Recruitment 2022 : Details of Vacancies

ಹುದ್ದೆ : ಅಪ್ರೆಂಟಿಸ್ [ಎಲೆಕ್ಟ್ರೀಶಿಯನ್, ಎಂ.ವಿ.ಬಿ.ಬಿ, ಫಿಟ್ಟರ್, ವೆಲ್ಡರ್ (ಗ್ಯಾಸ್ & ಎಲೆಕ್ಟ್ರೀಶಿಯನ್), ಮೆಕ್ಯಾನಿಕ್ ಡಿಸೇಲ್, ಪೇಂಟರ್ (ಜನರಲ್), ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಕೋಪಾ]

ಕರ್ತವ್ಯ ಸ್ಥಳ : ತರಬೇತಿಗಾಗಿ ಆಯ್ಕೆ ಹೊಂದಿದ ಅಭ್ಯರ್ಥಿಗಳನ್ನು ವಿಭಾಗದ ವ್ಯಾಪ್ತಿಗೆ ಒಳಪಟ್ಟ ಹಾವೇರಿ/ ಹಿರೇಕೆರೂರು/ ರಾಣೆಬೆನ್ನೂರ/ ಹಾನಗಲ್/ ಬ್ಯಾಡಗಿ/ ಸವಣೂರ/ ವಿಭಾಗೀಯ ಕಾರ್ಯಾಗಾರ/ ವಿಭಾಗೀಯ ಕಛೇರಿ ಘಟಕ/ ಕಛೇರಿಯ ಒಂದು ಸ್ಥಳಕ್ಕೆ ತರಬೇತಿಗಾಗಿ ನಿಯೋಜಿಸಲಾಗುವುದು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 62 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಎಲೆಕ್ಟ್ರೀಶಿಯನ್15
ಎಂ.ವಿ.ಬಿ.ಬಿ06
ಫಿಟ್ಟರ್10
ವೆಲ್ಡರ್ (ಗ್ಯಾಸ್ & ಎಲೆಕ್ಟ್ರೀಶಿಯನ್)02
ಮೆಕ್ಯಾನಿಕ್ ಡಿಸೇಲ್10
ಪೇಂಟರ್ (ಜನರಲ್)04
ಎಲೆಕ್ಟ್ರಾನಿಕ್ ಮೆಕ್ಯಾನಿಕ್10
ಕೋಪಾ5

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಆಯಾ ವೃತ್ತಿಯಲ್ಲಿ ಐ.ಟಿ.ಐ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಗಳಲ್ಲಿ ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇರ ನೇಮಕಾತಿ

ಆಯ್ಕೆ ವಿಧಾನ : ದಾಖಲೆಗಳ ಪರಿಶೀಲನೆ/ ಮೌಖಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿಯಿರುವ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಮೊದಲು www.apprenticeshipindia.gov.in ಆನ್‌ಲೈನ್ ನಲ್ಲಿ ನೋಂದಣಿ ಮಾಡಿಸಿ ಅರ್ಜಿಯನ್ನು ಸಲ್ಲಿಸಬೇಕು. ನಂತರ ಅಧಿಸೂಚನೆಯಲ್ಲಿ ನೀಡಲಾಗಿರುವ ಅರ್ಜಿ ನಮೂನೆಯಲ್ಲಿ, ಆನ್‌ಲೈನ್‌ ಅರ್ಜಿ ಸಲ್ಲಿಸಿದ ಬಗ್ಗೆ ಅದರ ನೋಂದಣಿ ಸಂಖ್ಯೆಯನ್ನು ಸೂಚಿಸಿ, ಇತ್ತೀಚಿನ ಪಾಸ್ ಪೋರ್ಟ್ ಸೈಜಿನ ಭಾವ ಚಿತ್ರವನ್ನು ಅಂಟಿಸಿ ಎಲ್ಲಾ ಮೂಲ ದಾಖಲಾತಿಗಳನ್ನು ಹಾಗೂ ಅವುಗಳ ಒಂದು ಸೆಟ್ ದೃಢೀಕೃತ ಪ್ರತಿಯೊಂದಿಗೆ ದಾಖಲೆಗಳ ಪರಿಶೀಲನೆ/ ಮೌಖಿಕ ಸಂದರ್ಶನಕ್ಕೆ ಹಾಜರಾಗಬೇಕು.

ಸಂದರ್ಶನ ನಡೆಯುವ ಸ್ಥಳ : ವಿಭಾಗೀಯ ನಿಯಂತ್ರಣಾಧಿಕಾರಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಹಾವೇರಿ ವಿಭಾಗ, ವಿಭಾಗೀಯ ಕಛೇರಿ ಪಿ.ಬಿ. ರಸ್ತೆ (ಆರ್.ಟಿ.ಓ ಕಛೇರಿ ಪಕ್ಕ), ಹಾವೇರಿ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 29, 2022
ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 17, 2022
ಅಭ್ಯರ್ಥಿಗಳು ಮೌಖಿಕ ಸಂದರ್ಶನಕ್ಕೆ ಹಾಜರಾಗುವ ದಿನಾಂಕ : ಅಕ್ಟೋಬರ್ 18, 2022 ಬೆಳಿಗ್ಗೆ 10.00 ಘಂಟೆಗೆ

NWKRTC Haveri Division Recruitment 2022 : Important Links

Notification & Application Form Click Here
Apply Online www.apprenticeshipindia.gov.in

ಇತರೆ ಮಾಹಿತಿ :
• ಒಂದಕ್ಕಿಂತ ಹೆಚ್ಚಿಗೆ ವೃತ್ತಿಯಲ್ಲಿ ತರಬೇತಿಗೆ ಅರ್ಜಿ ಸಲ್ಲಿಸಬಯಸುವವರು ಬೇರೆ ಬೇರೆ ಅಂದರೆ ಪ್ರತ್ಯೇಕ ಅರ್ಜಿಗಳನ್ನು ಕ್ರಮಬದ್ಧವಾಗಿ ಸಲ್ಲಿಸಬೇಕು.
• ಈ ಹುದ್ದೆಗಳಿಗೆ ಹಾವೇರಿ ಜಿಲ್ಲೆಯ ಅಭ್ಯರ್ಥಿಗಳಿಗೆ ಪ್ರಾಶಸ್ತ್ಯ ನೀಡಲಾಗುವುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment