NYKS Recruitment 2021 : ನೆಹರು ಯುವ ಕೇಂದ್ರದಲ್ಲಿ ಖಾಲಿಯಿರುವ ರಾಷ್ಟ್ರೀಯ ಯುವ ಸ್ವಯಂಸೇವಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಗೌರವಧನ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
NYKS Recruitment 2021 : Details of Vacancies
ಹುದ್ದೆ :
ರಾಷ್ಟ್ರೀಯ ಯುವ ಸ್ವಯಂಸೇವಕರು
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 13206 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಕನಿಷ್ಠ ಎಸ್.ಎಸ್.ಎಲ್.ಸಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯೋಮಾನ :
ದಿನಾಂಕ 01 ಏಪ್ರಿಲ್ 2021ಕ್ಕೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 29 ವರ್ಷ ವಯೋಮಾನ ನಿಗದಿಪಡಿಸಲಾಗಿದೆ
ಗೌರವಧನ :
ಆಯ್ಕೆಯಾದ ಅಭ್ಯರ್ಥಿಗಳ ಮಾಸಿಕ ರೂ. 5,000 ಗೌರವಧನ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಹೆಚ್ಚಿನ ಶೈಕ್ಷಣಿಕ ಅರ್ಹತೆ, ಮೆರಿಟ್ ಹಾಗೂ ಬೇಸಿಕ್ ಕಂಪ್ಯೂಟರ್ ಜ್ಞಾನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು.
ಉದ್ಯೋಗ ಮಾಹಿತಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2021
ನೆಹರು ಯುವ ಕೇಂದ್ರದಲ್ಲಿ ಖಾಲಿಯಿರುವ ರಾಷ್ಟ್ರೀಯ ಯುವ ಸ್ವಯಂಸೇವಕರ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಹಾಗೂ ಆಫ್‌ಲೈನ್ ಎರಡು ವಿಧಾನದ ಮೂಲಕವು ಅರ್ಜಿಯನ್ನು ಸಲ್ಲಿಸಬಹುದು.
• ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನೆಹರು ಯುವ ಕೇಂದ್ರದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.
• ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನೆಹರು ಯುವ ಕೇಂದ್ರದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಕಚೇರಿಯ ವಿಳಾಸಕ್ಕೆ ಸಲ್ಲಿಸಬಹುದು.
ನಿಗದಿತ ಅರ್ಜಿ ಶುಲ್ಕದ ವಿವರ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 05, 2021,
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರುವರಿ 20, 2021
NYKS Recruitment 2021 : Important Links
ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here
ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.