PNB Recruitment 2021 : 100 ಮ್ಯಾನೇಜರ್ ಸೆಕ್ಯೂರಿಟಿ ಹುದ್ದೆಗಳ ಭರ್ತಿ

PNB Recruitment 2021 : ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಖಾಲಿಯಿರುವ ಮ್ಯಾನೇಜರ್ ಸೆಕ್ಯೂರಿಟಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ವಯೋಮಾನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

PNB Recruitment 2021 : Details of Vacancies

ಹುದ್ದೆ :
ಮ್ಯಾನೇಜರ್ ಸೆಕ್ಯೂರಿಟಿ

ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 100 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವೇತನ :
ಆಯ್ಕೆಯಾದ ಅಭ್ಯರ್ಥಿಗಳ ಮಾಸಿಕ ರೂ. 48,170 ರಿಂದ ರೂ. 69,810 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

ವಯೋಮಾನ :
ದಿನಾಂಕ 01/01/2021ಕ್ಕೆ ಅಭ್ಯರ್ಥಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ,
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ.

ಉದ್ಯೋಗ ಮಾಹಿತಿ : 433 ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿ

ಆಯ್ಕೆ ವಿಧಾನ :
ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

PNB Recruitment 2021 : ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಪಂಜಾಬ್ ನ್ಯಾಷನಲ್ ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಂಚೆ ಮೂಲಕ ಕಛೇರಿಯ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ :
Chief Manager (Recruitment Section),
HRM Division, Panjab National Bank,
Corporate Office plot no 4, Sector 10,
Dwarka, New Delhi – 110075

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ರೂ. 50
• ಇತರೆ ಅಭ್ಯರ್ಥಿಗಳಿಗೆ ರೂ. 500

ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ಮೂಲಕ Cash Voucher ಡೌನ್ಲೋಡ್ ಮಾಡಿ ನಂತರ ಅದನ್ನು ಭರ್ತಿ ಮಾಡಿ, ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ನಮೂನೆ ಡೌನ್ಲೋಡ್ ಮಾಡಲು ಪ್ರಾರಂಭದ ದಿನಾಂಕ : ಜನವರಿ 27, 2021
ಅರ್ಜಿ ನಮೂನೆ ಡೌನ್ಲೋಡ್ ಮಾಡಲು ಕೊನೆಯ ದಿನಾಂಕ : ಫೆಬ್ರುವರಿ 13, 2021
ಕಛೇರಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರುವರಿ 15, 2021

ಅಧಿಸೂಚನೆ : Click Here
ವೆಬ್‌ಸೈಟ್ : Click Here

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.