ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ 2026 – Punjab National Bank LBO Recruitment 2026

Punjab National Bank LBO Recruitment 2026

Punjab National Bank LBO Recruitment 2026 : ಪಂಜಾಬ್ ನ್ಯಾಷನಲ್ ಬ್ಯಾಂಕ್ ಇದರಲ್ಲಿ ಅಗತ್ಯವಿರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Punjab National Bank LBO Recruitment 2026 : Details of Vacancies

ಹುದ್ದೆ :

ಲೋಕಲ್ ಬ್ಯಾಂಕ್ ಆಫೀಸರ್

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 545 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 78 ಹುದ್ದೆಗಳು ಖಾಲಿ ಇದೆ.

ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇಮಕಾತಿ 2026

ವಯೋಮಾನ :

ದಿನಾಂಕ 01/07/2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಾನ ಹೊಂದಿರಬೇಕು.
• ಕನಿಷ್ಠ 20 ವರ್ಷ
• ಗರಿಷ್ಠ 30 ವರ್ಷ

ವಯೋಮಿತಿ ಸಡಿಲಿಕೆ :

• ಒಬಿಸಿ (ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 3 ವರ್ಷ
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 48,480 ರಿಂದ ರೂ. 85,920 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

• ಆನ್‌ಲೈನ್‌ ಪರೀಕ್ಷೆ
• ಸ್ಕ್ರೀನಿಂಗ್
• ಭಾಷಾ ಪ್ರಾವೀಣ್ಯತೆಯ ಪರೀಕ್ಷೆ (10ನೇ ತರಗತಿ ಅಥವಾ 12ನೇ ತರಗತಿಯಲ್ಲಿ ನಿರ್ದಿಷ್ಟಪಡಿಸಿದ ಸ್ಥಳೀಯ ಭಾಷೆಯನ್ನು ಅಧ್ಯಯನ ಮಾಡಿದ ಅಭ್ಯರ್ಥಿಗಳು ಭಾಷಾ ಪ್ರಾವೀಣ್ಯತೆ ಪರೀಕ್ಷೆಯಿಂದ ವಿನಾಯಿತಿ ಪಡೆಯುತ್ತಾರೆ)
• ಸಂದರ್ಶನ

ಆನ್‌ಲೈನ್‌ ಪರೀಕ್ಷಾ ಮಾದರಿ –

Name of the TestNo. of Questions Maximum MarksDuration
Reasoning & Computer Aptitude 252535 Minutes
Data Analysis & Interpretation 252535 Minutes
English Language 252525 Minutes
Quantitative Aptitude 252535 Minutes
General/ Economy/ Banking/ Awareness 505050 Minutes

ಆನ್‌ಲೈನ್‌ ಪರೀಕ್ಷಾ ಕೇಂದ್ರಗಳು – ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಮೈಸೂರು, ಶಿವಮೊಗ್ಗ, ಮಂಗಳೂರು, ಬೆಳಗಾವಿ.

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಸೆಕ್ಷನ್ ಆಫೀಸರ್ ಹುದ್ದೆಗಳ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :

• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 59
• ಉಳಿದ ಅಭ್ಯರ್ಥಿಗಳು – ರೂ. 1180

ಶುಲ್ಕ ಪಾವತಿಸುವ ವಿಧಾನ :

ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 20, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 09, 2026
• ತಾತ್ಕಾಲಿಕ ಆನ್‌ಲೈನ್‌ ಪರೀಕ್ಷಾ ದಿನಾಂಕ : ಆಗಸ್ಟ್, 2026/ ಸೆಪ್ಟೆಂಬರ್, 2026

PNB Bank Local Bank Officer Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment