ರಡ್ಡಿ ಸಹಕಾರ ಬ್ಯಾಂಕ್ ನೇಮಕಾತಿ 2023 – Raddi Bank Dharwad Recruitment 2023

Raddi Bank Dharwad Recruitment 2023 : ರಡ್ಡಿ ಸಹಕಾರ ಬ್ಯಾಂಕ್ ನಿಯಮಿತ, ಧಾರವಾಡ ಇದರಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹಾಗೂ ಸೇವಕ/ ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Raddi Bank Dharwad Recruitment 2023 : Details of Vacancies

ಹುದ್ದೆ : ಕಿರಿಯ ಸಹಾಯಕ, ಸೇವಕ/ ಜವಾನ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಧಾರವಾಡ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 34 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಕಿರಿಯ ಸಹಾಯಕ 2417650-32000
ಸೇವಕ/ ಜವಾನ1012500-24000

ಶೈಕ್ಷಣಿಕ ಅರ್ಹತೆ :
• ಕಿರಿಯ ಸಹಾಯಕರು – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿ.ಎ./ಬಿ.ಕಾಂ/ಬಿ.ಎಸ್.ಸಿ/ಬಿ.ಸಿ.ಎ/ತತ್ಸಮಾನ ಪದವಿಯಲ್ಲಿ ತೇರ್ಗಡೆಯಾಗಿರಬೇಕು, ಹಾಗೂ ಹೈಯರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್‌ ಮ್ಯಾನೇಜಮೆಂಟ್ (ಎಚ್‌ಡಿಸಿಎಂ)/ ಡಿಪ್ಲೋಮಾ ಇನ್ ಕೋ-ಆಪರೇಟಿವ್‌ ಬ್ಯಾಂಕಿಂಗ್ ಮ್ಯಾನೇಜಮೆಂಟ್ (ಡಿಸಿಬಿಎಂ)/ ಡಿಪ್ಲೋಮಾ ಇನ್ ಅರ್ಬನ್ ಕೋ-ಆಪರೇಟಿವ್‌ ಬ್ಯಾಂಕಿಂಗ್ ಮ್ಯಾನೇಜಮೆಂಟ್ (ಡಿಯುಸಿಬಿಎಂ)/ ಜನರಲ್ ಡಿಪ್ಲೋಮಾ ಇನ್ ಕೋ-ಆಪರೇಟಿವ್‌ ಮ್ಯಾನೇಜಮೆಂಟ್ (ಜೆಡಿಸಿ)/ ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜಮೆಂಟ್ (ಡಿಸಿಎಂ) ಕೋರ್ಸಗಳಲ್ಲಿ ಉತ್ತೀರ್ಣರಾಗಿರತಕ್ಕದ್ದು.

• ಸೇವಕ/ ಜವಾನ – ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಾನ : ದಿನಾಂಕ 05/11/2022ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ ಪ.ಪಂಗಡ/ ಪ್ರ1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಉದ್ಯೋಗ ಮಾಹಿತಿ : ಜಿಲ್ಲಾ ಪಂಚಾಯತ್ ನೇಮಕಾತಿ 2023

ಆಯ್ಕೆ ವಿಧಾನ : ಕಿರಿಯ ಸಹಾಯಕ ಹುದ್ದೆಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು. ಸೇವಕ/ ಜವಾನ ಹುದ್ದೆಗೆ ಕೇವಲ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಲಿಖಿತ ಪರೀಕ್ಷೆ :

ರಡ್ಡಿ ಸಹಕಾರ ಬ್ಯಾಂಕ್ ನೇಮಕಾತಿ 2023 – Raddi Bank Dharwad Recruitment 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಕಿರಿಯ ಸಹಾಯಕ – ರೂ. 1,180
• ಸಿಪಾಯಿ – ರೂ. 590

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 26, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 22, 2023

Raddi Bank Dharwad Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment