ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023 – Raichur District Court Recruitment 2023

Raichur District Court Recruitment 2023 : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಯಚೂರು ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Raichur District Court Recruitment 2023 : Details of Vacancies

ಹುದ್ದೆ : ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಚಾಲಕ, ಆದೇಶ ಜಾರಿಕಾರರು ಹಾಗೂ ಜವಾನ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 26 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಶೀಘ್ರಲಿಪಿಗಾರರು ಗ್ರೇಡ್ 3127650-52650
ಬೆರಳಚ್ಚುಗಾರರು5+321400-42000
ಬೆರಳಚ್ಚು ನಕಲುಗಾರರು121400-42000
ಚಾಲಕ121400-42000
ಆದೇಶ ಜಾರಿಕಾರರು519950-37900
ಜವಾನ1017000-28950

ಶೈಕ್ಷಣಿಕ ಅರ್ಹತೆ :
ಶೀಘ್ರಲಿಪಿಗಾರರು ಗ್ರೇಡ್ 3 – ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಬೆರಳಚ್ಚುಗಾರರು – ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಬೆರಳಚ್ಚು ನಕಲುಗಾರರು – ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಕಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ – ಎಸ್‌ಎಸ್‌ಸಿ ಕಾನ್ಸ್‌ಟೇಬಲ್‌ (ಜಿಡಿ) ಹುದ್ದೆಗಳ ನೇಮಕಾತಿ 2023

ಚಾಲಕ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.

ಆದೇಶ ಜಾರಿಕಾರರು – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು

ಜವಾನ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಪ.ಜಾತಿ, ಪ. ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ

ಉದ್ಯೋಗ ಮಾಹಿತಿ – ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023

ಆಯ್ಕೆ ವಿಧಾನ :
• ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ನಿಗಧಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿನ ಮತ್ತು ಅರ್ಹತಾ ಪರೀಕ್ಷೆಯ ಒಟ್ಟು ಅಂಕಗಳ ಶೇಕಡಾವಾರುವಿನ ಮೊತ್ತದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
• ಆದೇಶ ಜಾರಿಕಾರ, ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 200
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 22, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 21, 2023

Raichur Court Recruitment 2023 : Important Links

NOTIFICATIONCLICK HERE
NOTIFICATION TYPIST (RPC)CLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment