Raichur District Court Recruitment 2023 : ರಾಯಚೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Raichur District Court Recruitment 2023 : Details of Vacancies
ಹುದ್ದೆ : ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಆದೇಶ ಜಾರಿಕಾರರು, ಜವಾನ
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 33 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಶೀಘ್ರಲಿಪಿಗಾರರು ಗ್ರೇಡ್ 3 | 7 | 27650-52650 |
ಬೆರಳಚ್ಚುಗಾರರು | 1 | 21400-42000 |
ಆದೇಶ ಜಾರಿಕಾರರು | 3 | 19950-37900 |
ಜವಾನ | 22 | 17000-28950 |
ಶೈಕ್ಷಣಿಕ ಅರ್ಹತೆ :
• ಶೀಘ್ರಲಿಪಿಗಾರರು ಗ್ರೇಡ್ 3 – 1) ಪಿ.ಯು.ಸಿ ಅಥವಾ ಮೂರು ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
2) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಶೀಘ್ರಲಿಪಿ ಹಿರಿಯ ಶ್ರೇಣಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
• ಬೆರಳಚ್ಚುಗಾರರು – 1) ಪಿ.ಯು.ಸಿ ಅಥವಾ ಮೂರು ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
2) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
• ಆದೇಶ ಜಾರಿಕಾರರು – 1) ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
2) ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು.
3) ಲಘು ವಾಹನ ಚಾಲನಾ ಪರವಾನಗಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.
• ಜವಾನ – 1) ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
2) ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು.
ಉದ್ಯೋಗ ಮಾಹಿತಿ : ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಪ.ಜಾತಿ, ಪ.ಪಂ., ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಆಯ್ಕೆ ವಿಧಾನ :
• ಶೀಘ್ರಲಿಪಿಗಾರ, ಬೆರಳಚ್ಚುಗಾರ – ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಉಕ್ತ ಲೇಖನವನ್ನು ಅನುಲಿಪಿ ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು
• ಆದೇಶ ಜಾರಿಕಾರ, ಜವಾನ – 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಹಾಲು ಉತ್ಪಾದಕರ ಒಕ್ಕೂಟದಲ್ಲಿ ನೇಮಕಾತಿ 2023
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 200
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ರೂ. 100
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರವರಿ 09, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 10, 2023
Raichur District Court Recruitment 2023 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.