ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ 2026 – Raichur District Gram Panchayat Recruitment 2026

Raichur District Gram Panchayat Recruitment 2026

Raichur District Gram Panchayat Recruitment 2026 : ರಾಯಚೂರು ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ರಾಯಚೂರು ಗ್ರಾಮ ಪಂಚಾಯಿತಿಯಲ್ಲಿ ಈಗಾಗಲೇ 13 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ 13 ಹುದ್ದೆಗಳಲ್ಲಿ ಕೇವಲ 8 ಗ್ರಾಮ ಪಂಚಾಯಿತಿಯ ಹುದ್ದೆಗಳಿಗೆ ಮಾತ್ರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಉಳಿದ 5 ಗ್ರಾಮ ಪಂಚಾಯಿತಿಯ ಹುದ್ದೆಗೆ ಅರ್ಜಿ ಸಲ್ಲಿಕೆಯಾಗಿರುವುದಿಲ್ಲ. ಆದ್ದರಿಂದ ಉಳಿದ 5 ಗ್ರಾಮ ಪಂಚಾಯಿತಿಯ ಹುದ್ದೆಗಳ ಭರ್ತಿಗೆ ಈಗ ಮರು ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ.

Raichur District Gram Panchayat Recruitment 2026 : Details of Vacancies

ಹುದ್ದೆ :

ಗ್ರಾಮ ಪಂಚಾಯತ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು

ಕರ್ತವ್ಯ ಸ್ಥಳ :

ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ರಾಯಚೂರು ಜಿಲ್ಲೆಯ ದೇವದುರ್ಗ, ಮಾನವಿ, ರಾಯಚೂರು ಹಾಗೂ ಸಿರವಾರ ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 5 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮ ಪಂಚಾಯಿತಿ ಹೆಸರುಹುದ್ದೆಗಳ ಸಂಖ್ಯೆ
ಮಸರಕಲ್1
ಭೋಗಾವತಿ1
ಮರ್ಚಟ್ಹಾಳ1
ಗಣದಿನ್ನಿ1
ಜೇರಬಂಡಿ1

ಶೈಕ್ಷಣಿಕ ಅರ್ಹತೆ :

ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳ ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಿಂದ ಸೆಕ್ಷನ್ ಕಂಟ್ರೋಲರ್ ಹುದ್ದೆಗಳ ನೇಮಕಾತಿ 2026

ವಯೋಮಿತಿ :

ದಿನಾಂಕ 10/06/2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 18 ವರ್ಷ
• ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
• ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ

ವೇತನ :

ಗ್ರಾಮ ಪಂಚಾಯತ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು ಸರ್ಕಾರವು ಕಾಲಕಾಲಕ್ಕೆ ನಿಗದಿಪಡಿಸುವ ಗೌರವ ಸಂಭಾವನೆಗೆ ಅರ್ಹರಾಗಿರುತ್ತಾರೆ.

ಆಯ್ಕೆ ವಿಧಾನ :

ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕೆಇಎಯಿಂದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :

• ಸಾಮಾನ್ಯ ಅಭ್ಯರ್ಥಿಗಳಿಗೆ – ರೂ. 500
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ರೂ. 300
• ಪ.ಜಾತಿ, ಪ.ಪಂಗಡ, ಪ್ರ1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ರೂ. 200
• ವಿಶೇಷ ಚೇತನ ಅಭ್ಯರ್ಥಿಗಳಿಗೆ – ರೂ. 100

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಪೂರ್ವದಲ್ಲಿ ಗ್ರಾಮ ಪಂಚಾಯತಿಯಲ್ಲಿನ ಯಾವುದೇ ಎಸ್.ಬಿ.ಐ ಶಾಖೆಗೆ ಭೇಟಿ ನೀಡಿ ಅರ್ಜಿ ಶುಲ್ಕ ಪಾವತಿಸಿ, ಶುಲ್ಕ ಪಾವತಿಸಿದ ರಶೀದಿಯನ್ನು ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು.

ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ 2026 – Raichur District Gram Panchayat Recruitment 2026

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 15, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 29, 2026

Raichur District Gram Panchayat Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಇತರೆ ಮಾಹಿತಿ : ಆಯಾ ಗ್ರಾಮ ಪಂಚಾಯಿತಿಯ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲನೇ ಆದ್ಯತೆ ನೀಡಲಾಗುವುದು. ಅದೇ ತಾಲೂಕಿನ ಇತರೆ ಗ್ರಾಮ ಪಂಚಾಯಿತಿಯ ಅಭ್ಯರ್ಥಿಗಳಿಗೆ ಎರಡನೇ ಆದ್ಯತೆ ನೀಡಲಾಗುವುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment