
Raichur Gram Panchayat Recruitment 2026 : ರಾಯಚೂರು ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Raichur Gram Panchayat Recruitment 2026 : Details of Vacancies
ಹುದ್ದೆ :
ಗ್ರಾಮ ಪಂಚಾಯತ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು.
ಕರ್ತವ್ಯ ಸ್ಥಳ :
ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ರಾಯಚೂರು ಜಿಲ್ಲೆಯ ಸಿಂಧನೂರು, ದೇವದುರ್ಗ, ಸಿರವಾರ, ಮಾನವಿ, ಮಸ್ಕಿ, ಲಿಂಗಸೂಗೂರು, ರಾಯಚೂರು ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 13 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
| ತಾಲೂಕು | ಹುದ್ದೆಗಳ ಸಂಖ್ಯೆ |
| ಸಿಂಧನೂರು | 3 |
| ದೇವದುರ್ಗ | 2 |
| ಸಿರವಾರ | 3 |
| ಮಾನವಿ | 1 |
| ಮಸ್ಕಿ | 2 |
| ಲಿಂಗಸೂಗೂರು | 1 |
| ರಾಯಚೂರು | 1 |
ಶೈಕ್ಷಣಿಕ ಅರ್ಹತೆ :
ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳ ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.
ಉದ್ಯೋಗ ಮಾಹಿತಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ ಬೃಹತ್ ನೇಮಕಾತಿ 2026
ವಯಸ್ಸಿನ ಮೀತಿ :
ದಿನಾಂಕ 27/05/2026ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
• ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ
ವೇತನ :
ಗ್ರಾಮ ಪಂಚಾಯತ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು ಸರ್ಕಾರವು ಕಾಲಕಾಲಕ್ಕೆ ನಿಗದಿಪಡಿಸುವ ಗೌರವ ಸಂಭಾವನೆಗೆ ಅರ್ಹರಾಗಿರುತ್ತಾರೆ.
ಆಯ್ಕೆ ವಿಧಾನ :
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಕೆಇಎಯಿಂದ ಎಫ್‌ಡಿಎ ಹಾಗೂ ಎಸ್‌ಡಿಎ ಹುದ್ದೆಗಳ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ :
• ಸಾಮಾನ್ಯ ಅಭ್ಯರ್ಥಿಗಳಿಗೆ – ರೂ. 500
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ರೂ. 300
• ಪ.ಜಾತಿ, ಪ.ಪಂಗಡ, ಪ್ರ1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ರೂ. 200
• ವಿಶೇಷ ಚೇತನ ಅಭ್ಯರ್ಥಿಗಳಿಗೆ – ರೂ. 100
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಇಲಾಖೆಯ ಬ್ಯಾಂಕ್ ಖಾತೆಗೆ ಶುಲ್ಕ ಪಾವತಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 27, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 10, 2026
Raichur Gram Panchayat Library Supervisor Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಇತರೆ ಮಾಹಿತಿ : ಈ ಹುದ್ದೆಗೆ ಆಯಾ ಗ್ರಾಮ ಪಂಚಾಯಿತಿಯ ಸ್ಥಳೀಯ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.