Raichur Zilla Panchayat Recruitment 2022 – Apply Online for 11 Technical Assistant Posts

Raichur Zilla Panchayat Recruitment 2022 : ರಾಯಚೂರು ಜಿಲ್ಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಗತ್ಯವಿರುವ ತಾಂತ್ರಿಕ ಸಹಾಯಕರು ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Raichur Zilla Panchayat Recruitment 2022 : Details of Vacancies

ಹುದ್ದೆ : ತಾಂತ್ರಿಕ ಸಹಾಯಕರು (ಸಿವಿಲ್), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ಕೃಷಿ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರಾಯಚೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 11 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ತಾಂತ್ರಿಕ ಸಹಾಯಕರು (ಸಿವಿಲ್)2
ತಾಂತ್ರಿಕ ಸಹಾಯಕರು (ತೋಟಗಾರಿಕೆ)1
ತಾಂತ್ರಿಕ ಸಹಾಯಕರು (ಅರಣ್ಯ)2
ತಾಂತ್ರಿಕ ಸಹಾಯಕರು (ಕೃಷಿ)6

ಶೈಕ್ಷಣಿಕ ಅರ್ಹತೆ :
• ತಾಂತ್ರಿಕ ಸಹಾಯಕರು (ಸಿವಿಲ್) – ಡಿಪ್ಲೊಮಾ ಸಿವಿಲ್/ ಬಿಇ/ ಬಿ.ಟೆಕ್ (ಸಿವಿಲ್). ಬಿಇ (ಸಿವಿಲ್) ಅಭ್ಯರ್ಥಿಗಳು ಬಂದಲ್ಲಿ ಡಿಪ್ಲೊಮಾ ಸಿವಿಲ್ ಅಭ್ಯರ್ಥಿಗಳನ್ನು ಪರಿಗಣಿಸುವುದಿಲ್ಲ.
• ತಾಂತ್ರಿಕ ಸಹಾಯಕರು (ತೋಟಗಾರಿಕೆ) – ತೋಟಗಾರಿಕೆ ಪದವಿ ಮತ್ತು ಇತರ ತತ್ಸಮಾನ ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
• ತಾಂತ್ರಿಕ ಸಹಾಯಕರು (ಅರಣ್ಯ) – ಅರಣ್ಯ ಪದವಿ ಮತ್ತು ಇತರ ತತ್ಸಮಾನ ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
• ತಾಂತ್ರಿಕ ಸಹಾಯಕರು (ಕೃಷಿ) – ಕೃಷಿ ಪದವಿ ಮತ್ತು ಇತರ ತತ್ಸಮಾನ ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 24,000 ಸಂಭಾವನೆ ಹಾಗೂ ಪ್ರಯಾಣ ಭತ್ಯೆ ರೂ. 2000 ನೀಡಲಾಗುವುದು. (ತಾಂತ್ರಿಕ ಸಹಾಯಕ ಸಿವಿಲ್ ಹುದ್ದೆಗೆ ಡಿಪ್ಲೊಮಾ ಅಭ್ಯರ್ಥಿಗಳಿಗೆ ರೂ. 22,000 ಸಂಭಾವನೆ ನೀಡಲಾಗುವುದು)

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್, ಅಟೆಂಡರ್ ಹುದ್ದೆಯ ನೇರ ನೇಮಕಾತಿ

ಆಯ್ಕೆ ವಿಧಾನ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ, ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಹೊಂದಿದ ಅಂಕಗಳು ಹಾಗೂ ಪಡೆದ ಸೇವಾ ಅನುಭವದ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು.

ಅನುಭವ : ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷ ಅನುಭವ ಹೊಂದಿರತಕ್ಕದ್ದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 24, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 03, 2022
ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಾದ ದಿನಾಂಕ : ಡಿಸೆಂಬರ್ 12, 2022
ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸುವ ದಿನಾಂಕ : ಡಿಸೆಂಬರ್ 15, 2022

Raichur Zilla Panchayat Recruitment 2022 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment