ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2023 – Raichur Zilla Panchayat Recruitment 2023

Raichur Zilla Panchayat Recruitment 2023 : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರಾಯಚೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Raichur Zilla Panchayat Recruitment 2023 : Details of Vacancies

ಹುದ್ದೆ : ಡಿಸ್ಟ್ರಿಕ್ಟ್ ಜಿಐಎಸ್ ಎಕ್ಸ್ಪರ್ಟ್, ಬ್ಲಾಕ್ ಜಿಐಎಸ್ ಎಕ್ಸ್ಪರ್ಟ್, ಬ್ಲಾಕ್ ಎನ್.ಆರ್.ಎಂ ಎಕ್ಸ್ಪರ್ಟ್, ಬ್ಲಾಕ್ ಲೈವ್ಲಿಹೂಡ್ ಎಕ್ಸ್ಪರ್ಟ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರಾಯಚೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 08 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಡಿಸ್ಟ್ರಿಕ್ಟ್ ಜಿಐಎಸ್ ಎಕ್ಸ್ಪರ್ಟ್135,000
ಬ್ಲಾಕ್ ಜಿಐಎಸ್ ಎಕ್ಸ್ಪರ್ಟ್135,000
ಬ್ಲಾಕ್ ಎನ್.ಆರ್.ಎಂ ಎಕ್ಸ್ಪರ್ಟ್330,000
ಬ್ಲಾಕ್ ಲೈವ್ಲಿಹೂಡ್ ಎಕ್ಸ್ಪರ್ಟ್330,000

ಶೈಕ್ಷಣಿಕ ಅರ್ಹತೆ :
• ಡಿಸ್ಟ್ರಿಕ್ಟ್ ಜಿಐಎಸ್ ಎಕ್ಸ್ಪರ್ಟ್ – ಎಂ.ಟೆಕ್/ಎಂ.ಇ/ಎಂ.ಎಸ್ಸಿ/ ಬಿ.ಇ/ ಬಿ.ಟೆಕ್/ ಸ್ನಾತಕೋತ್ತರ ಪದವಿ ಜೊತೆಗೆ 2 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.

ಬ್ಲಾಕ್ ಜಿಐಎಸ್ ಎಕ್ಸ್ಪರ್ಟ್ – ಎಂ.ಟೆಕ್/ಎಂ.ಇ/ಎಂ.ಎಸ್ಸಿ/ ಬಿ.ಇ/ ಬಿ.ಟೆಕ್/ ಎಂ.ಸಿ.ಎ/ ಸ್ನಾತಕೋತ್ತರ ಪದವಿ ಜೊತೆಗೆ 1 ವರ್ಷ 6 ತಿಂಗಳು ಕೆಲಸದ ಅನುಭವ ಹೊಂದಿರಬೇಕು.

• ಬ್ಲಾಕ್ ಎನ್.ಆರ್.ಎಂ ಎಕ್ಸ್ಪರ್ಟ್ – ಬಿ.ಟೆಕ್ ಸಿವಿಲ್ ಇನ್ ಇಂಜಿನಿಯರಿಂಗ್/ ಅಗ್ರಿಕಲ್ಚರ್ ಇಂಜಿನಿಯರಿಂಗ್/ ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್ ಜೊತೆಗೆ ಬಿ.ಟೆಕ್ ಅಭ್ಯರ್ಥಿಗಳಿಗೆ 2 ವರ್ಷ, ಡಿಪ್ಲೊಮಾ ಅಭ್ಯರ್ಥಿಗಳಿಗೆ 4 ವರ್ಷ ಕೆಲಸದ ಅನುಭವ ಹೊಂದಿರಬೇಕು.

• ಬ್ಲಾಕ್ ಲೈವ್ಲಿಹೂಡ್ ಎಕ್ಸ್ಪರ್ಟ್ – ಅಗ್ರಿಕಲ್ಚರ್ ಎಕನಾಮಿಕ್ಸ್/ ಹೊರ್ಟಿಕಲ್ಚರ್/ ಅಗ್ರೋ ಫಾರೆಸ್ಟ್ರಿ/ ಅಗ್ರೋನಮಿ/ ಫಾರೆಸ್ಟ್ರಿ ಸ್ನಾತಕೋತ್ತರ ಪದವಿ ಜೊತೆಗೆ 2 ವರ್ಷ ಕೆಲಸದ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ : ಎಸ್.ಡಿ.ಎ, ಎಫ್.ಡಿ.ಎ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ : ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಹೊಂದಿದ ಅಂಕಗಳು ಹಾಗೂ ಪಡೆದ ಸೇವಾ ಅನುಭವದ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅನುಭವ : ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕಾರ್ಯಾನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 15, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 24, 2023
ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸುವ ದಿನಾಂಕ : ಆಗಸ್ಟ್ 10, 2023

Raichur Zilla Panchayat Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment