Ramanagara District Court Recruitment 2022 – Apply Online for 27 Process Server, Peon Posts

Ramanagara District Court Recruitment 2022 : ರಾಮನಗರ ಜಿಲ್ಲಾ ನ್ಯಾಯಾಲಯ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Ramanagara District Court Recruitment 2022 : Details of Vacancies

ಹುದ್ದೆ : ಆದೇಶ ಜಾರಿಕಾರರು ಮತ್ತು ಜವಾನರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರಾಮನಗರ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 27 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಆದೇಶ ಜಾರಿಕಾರ0619,950-37,900
ಜವಾನ2117,000-28,950

ಶೈಕ್ಷಣಿಕ ಅರ್ಹತೆ :

ಆದೇಶ ಜಾರಿಕಾರ ಹುದ್ದೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಡ್ರೈವಿಂಗ್ ಲೈಸೆನ್ಸ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗೆ ಕನ್ನಡದಲ್ಲಿ ಓದಲು, ಬರೆಯಲು ತಿಳಿದಿರಬೇಕು.
ಜವಾನ ಹುದ್ದೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗೆ ಕನ್ನಡ ಭಾಷೆಯನ್ನು ಓದಲು, ಬರೆಯಲು ತಿಳಿದಿರಬೇಕು.

ಉದ್ಯೋಗ ಮಾಹಿತಿ : ಕೆನರಾ ಡಿಸಿಸಿ ಬ್ಯಾಂಕ್ ನೇಮಕಾತಿ 2022

ವಯೋಮಾನ : ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಪ.ಜಾತಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ಆಯ್ಕೆ ವಿಧಾನ : ಆದೇಶ ಜಾರಿಕಾರ, ಜವಾನ ಹುದ್ದೆಗೆ ಎಸ್.ಎಸ್.ಎಲ್.ಸಿ.ಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು. ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.

ಉದ್ಯೋಗ ಮಾಹಿತಿ : ಕರ್ನಾಟಕ ಹೈಕೋರ್ಟಿನಲ್ಲಿ ಗ್ರೂಪ್ ಡಿ ಹುದ್ದೆಗೆ ಅರ್ಜಿ ಆಹ್ವಾನ

ರಾಮನಗರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ರಾಮನಗರ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 200
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 16, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 20, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 20, 2022

Ramanagara District Court Recruitment 2022 : Important Links

Process Server Notification Click Here
Peon Notification Click Here
Apply Online Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment