Ramanagara District Court Recruitment 2023 : ರಾಮನಗರ ಜಿಲ್ಲಾ ನ್ಯಾಯಾಲಯ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Ramanagara District Court Recruitment 2023 : Details of Vacancies
ಹುದ್ದೆ : ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು ಹಾಗೂ ಬೆರಳಚ್ಚು ನಕಲುಗಾರರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರಾಮನಗರ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 06 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಶೀಘ್ರಲಿಪಿಗಾರರು ಗ್ರೇಡ್ 3 | 2+1 | 27650-52650 |
ಬೆರಳಚ್ಚುಗಾರರು | 2 | 21400-42000 |
ಬೆರಳಚ್ಚು ನಕಲುಗಾರರು | 1 | 21400-42000 |
ಶೈಕ್ಷಣಿಕ ಅರ್ಹತೆ :
ಶೀಘ್ರಲಿಪಿಗಾರರು ಗ್ರೇಡ್ 3 – ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಹಾಗೂ ಬೆರಳಚ್ಚು ಪ್ರೌಢದರ್ಜೆ ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣತೆ ಅಥವಾ
ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರ್ಯಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಶೀಘ್ರಲಿಪಿ ಪ್ರೌಢದರ್ಜೆ ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಬೆರಳಚ್ಚುಗಾರರು – ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢದರ್ಜೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣತೆ ಅಥವಾ
ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರ್ಯಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪ್ರೌಢದರ್ಜೆ ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಬೆರಳಚ್ಚು ನಕಲುಗಾರರು – ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಕಿರಿಯದರ್ಜೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣತೆ ಅಥವಾ
ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರ್ಯಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಕಿರಿಯದರ್ಜೆ ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಉದ್ಯೋಗ ಮಾಹಿತಿ : ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಪ.ಜಾತಿ, ಪ.ಪಂಗಡ, ಪ್ರವರ್ಗ1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಆಯ್ಕೆ ವಿಧಾನ :
ಶೀಘ್ರಲಿಪಿಗಾರ ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆಯ ಅಂಕಗಳು ಮತ್ತು ಅರ್ಹತಾ ಪರೀಕ್ಷೆಯ ಗರಿಷ್ಠ ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಬೆರಳಚ್ಚುಗಾರ, ಬೆರಳಚ್ಚು ನಕಲುಗಾರರು ಹುದ್ದೆಗೆ 1:5ರ ಅನುಪಾತದಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಗೆ ಅನುಗುಣವಾಗಿ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 200
• ಪ್ರವರ್ಗ 2ಎ, 2ಬಿ, 3ಎ, 3ಬಿ, ಪ.ಜಾತಿ, ಪ.ಪಂ, ಪ್ರ1 ಅಭ್ಯರ್ಥಿಗಳು – ರೂ. 100
• ಪ.ಜಾತಿ, ಪ.ಪಂಗಡ, ಪ್ರ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 22, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 22, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 23, 2024
Ramanagara Court Recruitment 2023 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Channel Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
2 thoughts on “ರಾಮನಗರ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023 – Ramanagara District Court Recruitment 2023”
Plc iam impotent jobs
Plc iam importance job