ರಾಮನಗರ (ಬೆಂಗಳೂರು ದಕ್ಷಿಣ) ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026 – Ramanagara District Court Recruitment 2026

Ramanagara District Court Recruitment 2026

Ramanagara District Court Recruitment 2026 : ರಾಮನಗರ (ಬೆಂಗಳೂರು ದಕ್ಷಿಣ) ಜಿಲ್ಲಾ ನ್ಯಾಯಾಲಯ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ, ಸೇವಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Ramanagara District Court Recruitment 2026 : Details of Vacancies

ಹುದ್ದೆ :

ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ, ಸೇವಕರು

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರಾಮನಗರ (ಬೆಂಗಳೂರು ದಕ್ಷಿಣ) ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 55 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಬೆರಳಚ್ಚುಗಾರ10
ಬೆರಳಚ್ಚು ನಕಲುಗಾರ1
ಆದೇಶ ಜಾರಿಕಾರ10
ಸೇವಕರು34

ಶೈಕ್ಷಣಿಕ ಅರ್ಹತೆ :

ಬೆರಳಚ್ಚುಗಾರ –

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಪ್ರೌಢದರ್ಜೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಅಥವಾ
ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪ್ರೌಢ ದರ್ಜೆ ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಬೆರಳಚ್ಚು ನಕಲುಗಾರ –

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಕಿರಿಯದರ್ಜೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಅಥವಾ
ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಕಿರಿಯ ದರ್ಜೆ ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆದೇಶ ಜಾರಿಕಾರ –

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಡ್ರೈವಿಂಗ್ ಲೈಸೆನ್ಸ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ಸೇವಕರು –

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು.

ಉದ್ಯೋಗ ಮಾಹಿತಿ : ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026

ವಯೋಮಾನ :

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 18 ವರ್ಷ
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35+5 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38+5 ವರ್ಷ
• ಪ.ಜಾತಿ, ಪ. ವರ್ಗ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40+5 ವರ್ಷ

ವೇತನ :

ಹುದ್ದೆವೇತನ
ಬೆರಳಚ್ಚುಗಾರರೂ. 34,100 – ರೂ. 67,600
ಬೆರಳಚ್ಚು ನಕಲುಗಾರರೂ. 34,100 – ರೂ. 67,600
ಆದೇಶ ಜಾರಿಕಾರರೂ. 31,775 – ರೂ. 61,300
ಸೇವಕರುರೂ. 27,000 – ರೂ. 46,675

ಆಯ್ಕೆ ವಿಧಾನ :

  • ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರ ಹುದ್ದೆಗೆ ಬೆರಳಚ್ಚುಪಡಿಸುವ ಅರ್ಹತಾ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
  • ಆದೇಶ ಜಾರಿಕಾರ ಮತ್ತು ಸೇವಕರು ಹುದ್ದೆಗೆ ಎಸ್.ಎಸ್.ಎಲ್.ಸಿಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

• ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 200
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 100
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 30, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 31, 2026
• ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 01, 2026

Ramanagara District Court Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment