
RBI Assistant Recruitment 2026 : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
RBI Assistant Recruitment 2026 : Details of Vacancies
ಹುದ್ದೆ :
ಅಸಿಸ್ಟಂಟ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 650 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 24 ಹುದ್ದೆಗಳು ಖಾಲಿ ಇದೆ.
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿಯಲ್ಲಿ ಕನಿಷ್ಠ ಸರಾಸರಿ ಶೇಕಡಾ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. (ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳು ಕೇವಲ ಉತ್ತೀರ್ಣ ಅಂಕಗಳನ್ನು ಹೊಂದಿದ್ದರೆ ಅರ್ಜಿ ಸಲ್ಲಿಸಬಹುದು)
ಉದ್ಯೋಗ ಮಾಹಿತಿ : ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ 2026
ವಯೋಮಿತಿ :
ದಿನಾಂಕ 01/02/2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 20 ವರ್ಷ
• ಗರಿಷ್ಠ 28 ವರ್ಷ
ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 29,000 ರಿಂದ ರೂ. 78,640 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
• ಪ್ರಿಲಿಮಿನರಿ ಪರೀಕ್ಷೆ
• ಮುಖ್ಯ ಪರೀಕ್ಷೆ
• ಭಾಷಾ ಪ್ರಾವೀಣ್ಯತೆ ಪರೀಕ್ಷೆ (LPT)
• ವೈದ್ಯಕೀಯ ಪರೀಕ್ಷೆ
• ದಾಖಲೆಗಳ ಪರಿಶೀಲನೆ
ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ –

ಪರೀಕ್ಷಾ ಕೇಂದ್ರಗಳು :
ಪ್ರಿಲಿಮಿನರಿ ಪರೀಕ್ಷಾ ಕೇಂದ್ರಗಳು –
ಬೆಳಗಾವಿ, ಬೆಂಗಳೂರು, ಕಲಬುರಗಿ, ಹುಬ್ಬಳ್ಳಿ/ಧಾರವಾಡ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ.
ಮುಖ್ಯ ಪರೀಕ್ಷಾ ಕೇಂದ್ರಗಳು –
ಬೆಂಗಳೂರು, ಹುಬ್ಬಳ್ಳಿ/ಧಾರವಾಡ, ಮೈಸೂರು, ಶಿವಮೊಗ್ಗ, ಉಡುಪಿ.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ :
• ಜನರಲ್, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು – ರೂ. 450
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಬಿಡಿ/ ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
ಶುಲ್ಕ ಪಾವತಿಸುವ ವಿಧಾನ :
ನಿಗದಿಪಡಿಸಿದ ಶುಲ್ಕವನ್ನು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 16, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 08, 2026
• ತಾತ್ಕಾಲಿಕ ಪ್ರಿಲಿಮಿನರಿ ಪರೀಕ್ಷಾ ದಿನಾಂಕ : ಏಪ್ರಿಲ್ 11, 2026
• ತಾತ್ಕಾಲಿಕ ಮುಖ್ಯ ಪರೀಕ್ಷಾ ದಿನಾಂಕ : ಜೂನ್ 07, 2026
RBI Assistant Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.