RBI Office Attendant Recruitment 2021 : 841 ಆಫೀಸ್ ಅಟೆಂಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

RBI Office Attendant Recruitment 2021 : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಆಫೀಸ್ ಅಟೆಂಡೆಂಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RBI Office Attendant Recruitment 2021 : Details of Vacancies

ಹುದ್ದೆ : ಆಫೀಸ್ ಅಟೆಂಡೆಂಟ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 841 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 10,940 ರಿಂದ ರೂ. 23,700 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ

ವಯೋಮಾನ : ದಿನಾಂಕ 01/02/2021ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ನಿಗದಿಪಡಿಸಲಾಗಿದೆ. ಅದರಲ್ಲಿ,
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗ ಮಾಹಿತಿ : Belagavi District Court Recruitment 2021 : 31 ಪಿಯೋನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಆಫೀಸ್ ಅಟೆಂಡೆಂಟ್ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಒಬಿಸಿ ಅಭ್ಯರ್ಥಿಗಳು ರೂ. 450
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಅಭ್ಯರ್ಥಿಗಳು ರೂ. 50

ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 24, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 15, 2021

RBI Office Attendant Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.