RDPR Karnataka Recruitment 2021 – Apply Now 23 Consultant Post

RDPR Karnataka Recruitment 2021 : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿಯಿರುವ ಸಮಾಲೋಚಕರು ಹಾಗೂ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RDPR Karnataka Recruitment 2021 : Details of Vacancies

ಹುದ್ದೆ :
• ಕಿರಿಯ ಸಮಾಲೋಚಕರು : 01 ಹುದ್ದೆ
ಶೈಕ್ಷಣಿಕ ಅರ್ಹತೆ : ಸಿವಿಲ್ ಇಂಜಿನಿಯರಿಂಗ್
ವೇತನ : ರೂ. 60,000

• ಯೋಜನಾ ವ್ಯವಸ್ಥಾಪಕ : 01 ಹುದ್ದೆ
ಶೈಕ್ಷಣಿಕ ಅರ್ಹತೆ : ಸ್ನಾತಕೋತ್ತರ ಪದವಿ
ವೇತನ : ರೂ. 1,00,000 ರಿಂದ ರೂ. 1,20,000

• ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ ತಜ್ಞರು : 01 ಹುದ್ದೆ
ಶೈಕ್ಷಣಿಕ ಅರ್ಹತೆ : ಸ್ನಾತಕೋತ್ತರ ಪದವಿ
ವೇತನ : ರೂ. 60,000 ರಿಂದ ರೂ. 75,000

• ಸ್ಯಾನಿಟೈಸೇಷನ್ & ಹೈಜಿನ್ ಪ್ರಮೋಷನ್ ಕನ್ಸಲ್ಟೆಂಟ್
ಶೈಕ್ಷಣಿಕ ಅರ್ಹತೆ : ಪದವಿ/ಸ್ನಾತಕೋತ್ತರ ಪದವಿ
ವೇತನ : ರೂ. 60,000 ರಿಂದ ರೂ. 75,000

• ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು : 09 ಹುದ್ದೆ
ಶೈಕ್ಷಣಿಕ ಅರ್ಹತೆ : ಸಿವಿಲ್ ಇಂಜಿನಿಯರಿಂಗ್/ ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್
ವೇತನ : ರೂ. 35,000 ರಿಂದ ರೂ. 45,000

• MHM ಸಮಾಲೋಚಕರು : 01 ಹುದ್ದೆ
ಶೈಕ್ಷಣಿಕ ಅರ್ಹತೆ : ಪದವಿ/ ಸ್ನಾತಕೋತ್ತರ ಪದವಿ
ವೇತನ : ರೂ. 50,000

• ಜಿಲ್ಲಾ ಯೋಜನಾ ವ್ಯವಸ್ಥಾಪಕ : 04 ಹುದ್ದೆ
ಶೈಕ್ಷಣಿಕ ಅರ್ಹತೆ : ಸ್ನಾತಕೋತ್ತರ ಪದವಿ
ವೇತನ : ರೂ. 35,000 ರಿಂದ ರೂ. 45,000

• ಜಿಲ್ಲಾ MIS ಸಮಾಲೋಚಕರು : 02 ಹುದ್ದೆ
ಶೈಕ್ಷಣಿಕ ಅರ್ಹತೆ : ಎಂಸಿಎ, ಎಂಎಸ್ಸಿ ಕಂಪ್ಯೂಟರ್ ಸೈನ್ಸ್ / ಬಿಇ ಕಂಪ್ಯೂಟರ್ ಸೈನ್ಸ್
ವೇತನ : ರೂ. 25,000 ರಿಂದ ರೂ. 30,000

• ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು : 02 ಹುದ್ದೆ
ಶೈಕ್ಷಣಿಕ ಅರ್ಹತೆ : ಇಂಜಿನಿಯರಿಂಗ್ ಪದವಿ
ವೇತನ : ರೂ. 25,000 ರಿಂದ ರೂ. 30,000

• ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು : 01 ಹುದ್ದೆ
ಶೈಕ್ಷಣಿಕ ಅರ್ಹತೆ : ಸ್ನಾತಕೋತ್ತರ ಪದವಿ
ವೇತನ : ರೂ. 25,000 ರಿಂದ ರೂ. 30,000

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಶಿವಮೊಗ್ಗ, ರಾಮನಗರ, ಯಾದಗಿರಿ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಕಲಬುರಗಿ, ಬೆಂಗಳೂರು ನಗರ, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಧಾರವಾಡ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 23 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಯ ವಿಧ : ಅಭ್ಯರ್ಥಿಗಳನ್ನು ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.

ವಯೋಮಾನ : ಅಭ್ಯರ್ಥಿಗಳಿಗೆ ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು (ಕಿರಿಯ ಸಮಾಲೋಚಕರು ಹೊರತುಪಡಿಸಿ)

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಗಳಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟ

ಆಯ್ಕೆ ವಿಧಾನ : ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಾಗುತ್ತದೆ, ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿಯಿರುವ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ ವಯಸ್ಸಿನ ದೃಢೀಕರಣ ವಿದ್ಯಾರ್ಹತೆ ಅನುಭವ ಪ್ರಮುಖ ಸಾಮರ್ಥ್ಯಗಳು, Resume ಹಾಗೂ ಅರ್ಜಿ ಜೊತೆಗೆ “ನಾನು ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ” ಎಂಬುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಕಛೇರಿಯ ವಿಳಾಸಕ್ಕೆ ಕಳುಹಿಸಬೇಕು

ಅರ್ಜಿ ಸಲ್ಲಿಸುವ ವಿಳಾಸ : ಆಯುಕ್ತರು,
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2ನೇ ಮಹಡಿ, ಕೆ.ಹೆಚ್.ಬಿ ಕಟ್ಟಡ, ಕಾವೇರಿ ಭವನ, ಕೆ.ಜಿ. ರಸ್ತೆ, ಬೆಂಗಳೂರು

ನಿಗದಿತ ಅರ್ಜಿ ಶುಲ್ಕದ ವಿವರ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 07, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 27, 2021

RDPR Karnataka Recruitment 2021 : Important Links

ಅಧಿಸೂಚನೆ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.