RDPR Karnataka Recruitment 2021 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಂ.ಜಿ.ನರೇಗಾ ಸಾಮಾಜಿಕ ಪರಿಶೋಧನಾ ಸಂಘದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
RDPR Karnataka Recruitment 2021 : Details of Vacancies
ಹುದ್ದೆ : ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹಾಗೂ ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 35 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ | 01 | 24,000 |
ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ | 34 | 18,000 |
ಶೈಕ್ಷಣಿಕ ಅರ್ಹತೆ : ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಬಳಕೆಯ ಜ್ಞಾನ ಹೊಂದಿರಬೇಕು.
ಇತರೆ ಅರ್ಹತೆಗಳು/ಅನುಭವ : ಅಪೇಕ್ಷಣೀಯ
• ಸಾಮಾಜಿಕ ಪರಿಶೋಧನೆ ನಿರ್ವಹಿಸಿದ ಅನುಭವ – 2 ರಿಂದ 3 ವರ್ಷ
• ಸ್ವಯಂ ಸೇವಾ ಸಂಘ/ಸಂಸ್ಥೆಗಳಲ್ಲಿ ಗ್ರಾಮೀಣಾಭಿವೃದ್ಧಿ ಚಟುವಟಿಕೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ – 3 ರಿಂದ 5 ವರ್ಷ
• ನರೇಗಾ ಕಾರ್ಯಕ್ರಮದ ಅನುಭವ – 2 ವರ್ಷ
ಉದ್ಯೋಗ ಮಾಹಿತಿ : ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಆದೇಶ ಜಾರಿಕಾರ ಹುದ್ದೆಗಳ ನೇರ ನೇಮಕಾತಿ
ಆಯ್ಕೆ ವಿಧಾನ : ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ನಿರ್ದೇಶಕರು, ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ,
ಮೊದಲನೇ ಮಹಡಿ, ಅಭಯ ಕಾಂಪ್ಲೆಕ್ಸ್, ಕೊಳೆಗೇರಿ ಅಭಿವೃದ್ದಿ ಮಂಡಳಿ ಕಟ್ಟಡ, ನಂ. 55, ರಿಸಲ್ದಾರ್ ರಸ್ತೆ, ಶೇಷಾದ್ರಿಪುರಂ, ಬೆಂಗಳೂರು – 560020
ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 17, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 05, 2022
RDPR Karnataka Recruitment 2021 : Important Links
ಅಧಿಸೂಚನೆ & ಅರ್ಜಿ ನಮೂನೆ : Click Here
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು :
ಹೆಚ್ಚಿನ ಮಾಹಿತಿಗಾಗಿ ಕಛೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ : 080-23460650
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.