RDPR Karnataka Recruitment 2021 – Apply Now Various Post

RDPR Karnataka Recruitment 2021 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಒಂಬುಡ್ಸ್‌ಮನ್‌ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RDPR Karnataka Recruitment 2021 : Details of Vacancies

ಹುದ್ದೆ : ಒಂಬುಡ್ಸ್‌ಮನ್‌

ಒಂಬುಡ್ಸ್‌ಮನ್‌ ಹುದ್ದೆಗಳಿರುವ ಜಿಲ್ಲೆಗಳು : ಬೆಳಗಾವಿ, ಬೆಂಗಳೂರು ಗ್ರಾಮಾಂತರ/ನಗರ, ಶಿವಮೊಗ್ಗ, ಚಿತ್ರದುರ್ಗ, ಬೀದರ್, ಹಾಸನ/ ಕೊಡಗು, ಕೊಪ್ಪಳ ಮತ್ತು ವಿಜಯನಗರ.

ಅರ್ಹತೆ : ಸಾರ್ವಜನಿಕ ಆಡಳಿತ, ಕಾನೂನು, ಶೈಕ್ಷಣಿಕ ಕ್ಷೇತ್ರ, ಸಮಾಜ ಸೇವೆ/ ಮ್ಯಾನೇಜ್ ಮೆಂಟ್ ಇವುಗಳಲ್ಲಿ ಯಾವುದಾದರೊಂದು ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಸೇವಾನುಭವ ಹೊಂದಿರಬೇಕು. ಸಾರ್ವಜನಿಕರೊಂದಿಗೆ ಅಥವಾ ಸಮುದಾಯದ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿದ ಅನುಭವವು ಒಂದು ಕಡ್ಡಾಯ ಅರ್ಹತೆಯಾಗಿರುತ್ತದೆ.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಗರಿಷ್ಠ ವಯಸ್ಸು 66 ವರ್ಷಗಳನ್ನು ಮೀರಿರಬಾರದು.

ವೇತನ : ಕೇಂದ್ರ/ ರಾಜ್ಯ ಸರ್ಕಾರವು ಹೊರಡಿಸುವ ಆದೇಶಗಳ ಅನುಸಾರ ಸಂಭಾವನೆ, ಸಿಟ್ಟಿಂಗ್ ಫೀಜು ನೀಡಲಾಗುವುದು. ಪ್ರಸ್ತುತ ಮಾಸಿಕ ರೂ. 10,000 ಗೌರವಧನ ಹಾಗೂ ಪ್ರತಿ ಸಿಟ್ಟಿಂಗ್ ಗೆ ರೂ. 1,000 ದಂತೆ ಗರಿಷ್ಠ ರೂ. 20,000 ಮಿತಿಗೊಳಪಟ್ಟು ಸಿಟ್ಟಿಂಗ್ ಫೀಜು ನೀಡಲಾಗುವುದು.

ಉದ್ಯೋಗ ಮಾಹಿತಿ : ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಆದೇಶ ಜಾರಿಕಾರ ಹುದ್ದೆಗಳ ನೇರ ನೇಮಕಾತಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ, ತಮ್ಮ ವ್ಯಕ್ತಿತ್ವ ಪರಿಚಯದ, ಕನಿಷ್ಠ 10 ವರ್ಷಗಳ ಕಾರ್ಯನಿರ್ವಹಣೆ ಅನುಭವದ ದಾಖಲೆ ಹಾಗೂ ಇತರೆ ಪೂರಕ ದಾಖಲೆಗಳೊಂದಿಗೆ ಅರ್ಜಿಯನ್ನು ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಆಯುಕ್ತರು ಗ್ರಾಮೀಣಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಪ್ಲಾಟ್ ನಂ‌. 1243, ಕೆ.ಎಸ್.ಐ.ಐ.ಡಿ.ಸಿ. ಕಟ್ಟಡ, ಐ.ಟಿ ಪಾರ್ಕ್, ಸೌತ್ ಬ್ಲಾಕ್, ರಾಜಾಜಿನಗರ ಇಂಡಸ್ಟ್ರೀಯಲ್ ಎಸ್ಟೇಟ್, ಬೆಂಗಳೂರು – 560044

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 13, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 14, 2022

RDPR Karnataka Recruitment 2021 : Important Links

ಅಧಿಸೂಚನೆ & ಅರ್ಜಿ ನಮೂನೆ : Click Here

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಆಡಳಿತ), ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ : 080-22342163

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment