
RDPR Karnataka Recruitment 2026 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಹಾತ್ಮ ಗಾಂಧಿ ನರೇಗಾ ಸಾಮಾಜಿಕ ಪರಿಶೋಧನಾ ಸಂಘದ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದಲ್ಲಿ ಅಗತ್ಯವಿರುವ ವ್ಯವಸ್ಥಾಪಕರು, ಪ್ರಥಮ ದರ್ಜೆ ಸಹಾಯಕರು ಹಾಗೂ ಲೆಕ್ಕ ಸಹಾಯಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
RDPR Karnataka Recruitment 2026 : Details of Vacancies
ಹುದ್ದೆ :
ವ್ಯವಸ್ಥಾಪಕರು, ಪ್ರಥಮ ದರ್ಜೆ ಸಹಾಯಕರು, ಲೆಕ್ಕ ಸಹಾಯಕರು.
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 4 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ವ್ಯವಸ್ಥಾಪಕರು | 1 |
| ಪ್ರಥಮ ದರ್ಜೆ ಸಹಾಯಕರು | 1 |
| ಲೆಕ್ಕ ಸಹಾಯಕರು | 2 |
ಶೈಕ್ಷಣಿಕ ಅರ್ಹತೆ :
ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಮಹಾನಗರ ಪಾಲಿಕೆಯಲ್ಲಿ ನೇಮಕಾತಿ 2026
ವಯೋಮಾನ :
| ಹುದ್ದೆ | ನೇರ ನೇಮಕಾತಿ ಅಭ್ಯರ್ಥಿ | ನಿವೃತ್ತ ನೌಕರರಿಗೆ |
| ವ್ಯವಸ್ಥಾಪಕರು | ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ | ಕನಿಷ್ಠ 60 ವರ್ಷ, ಗರಿಷ್ಠ 62 ವರ್ಷ |
| ಪ್ರಥಮ ದರ್ಜೆ ಸಹಾಯಕರು | 40 ವರ್ಷ | ಗರಿಷ್ಠ 62 ವರ್ಷ |
| ಲೆಕ್ಕ ಸಹಾಯಕರು | 40 ವರ್ಷ | ಕನಿಷ್ಠ 62 ವರ್ಷ |
ವೇತನ :
| ಹುದ್ದೆ | ವೇತನ |
| ವ್ಯವಸ್ಥಾಪಕರು | ರೂ. 28,000/- |
| ಪ್ರಥಮ ದರ್ಜೆ ಸಹಾಯಕರು | ರೂ. 22,000/- |
| ಲೆಕ್ಕ ಸಹಾಯಕರು | ರೂ. 22,000/- |
ಆಯ್ಕೆ ವಿಧಾನ :
ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅನುಭವ :
ಹುದ್ದೆಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ :
ನಿರ್ದೇಶಕರು, ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ, ಮೊದಲನೇ ಮಹಡಿ, ಅಭಯ ಕಾಂಪ್ಲೆಕ್ಸ್, ಕೊಳಗೇರಿ ಅಭಿವೃದ್ಧಿ ಮಂಡಳಿ ಕಟ್ಟಡ, ನಂ. 55, ರಿಸಲ್ದಾರ್ ರಸ್ತೆ, ಶೇಷಾದ್ರಿಪುರಂ, ಬೆಂಗಳೂರು – 560020
ಅರ್ಜಿಯ ಜೊತೆಗೆ ಒದಗಿಸಬೇಕಾದ ದಾಖಲೆಗಳು :
- ಜನ್ಮ ದಿನಾಂಕ ಕುರಿತು ಎಸ್.ಎಸ್.ಎಲ್.ಸಿ ಅಂಕಪಟ್ಟಿ.
- ವಿದ್ಯಾರ್ಹತೆ ಕುರಿತು ದೃಢೀಕೃತ ದಾಖಲಾತಿ ಪ್ರತಿಗಳು.
- ಅನುಭವಕ್ಕೆ ಸಂಬಂಧಿಸಿದ ದೃಢೀಕೃತ ದಾಖಲೆಗಳು.
- ನಿವೃತ್ತ ನೌಕರರಾದಲ್ಲಿ ನಿವೃತ್ತಿ ಹೊಂದಿದ ದಿನಾಂಕ ಕುರಿತು ಸರ್ಕಾರದ ಅಧಿಸೂಚನೆ ಪ್ರತಿಗಳು.
- ನಿವೃತ್ತಿ ಪೂರ್ವ ಹೊಂದಿದ ಹುದ್ದೆ ಹಾಗೂ ವೇತನ ಶ್ರೇಣಿ, ಕೊನೆಯ ವೇತನದ ದರ ಹಾಗೂ ಪಿಂಚಣಿ ದರ ಕುರಿತು ದಾಖಲೆಗಳು.
- ಕಂಪ್ಯೂಟರ್ ಜ್ಞಾನದ ಬಗ್ಗೆ ಅಂಗೀಕೃತ ಸಂಸ್ಥೆಯ ದೃಢೀಕರಣ ಪತ್ರ.
ನಿಗದಿತ ಅರ್ಜಿ ಶುಲ್ಕದ ವಿವರ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 10, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 30, 2026
RDPR Karnataka FDA Recruitment 2026 : Important Links
| NOTIFICATION & APPLICATION FORM | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.