ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2023 – RDWSD Karnataka Recruitment 2023

RDWSD Karnataka Recruitment 2023 : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಜಲ ಜೀವನ್ ಮಿಷನ್ ಯೋಜನೆಯಡಿ ಖಾಲಿ ಇರುವ ಸಮಾಲೋಚಕರ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RDWSD Karnataka Recruitment 2023 : Details of Vacancies

ಹುದ್ದೆ : ಜಿಲ್ಲಾ ಎಂಐಎಸ್ ಸಮಾಲೋಚಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ವಿವಿಧ ಹುದ್ದೆಯ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಮೂಲಕ ಪದವಿ, ಸ್ನಾತಕೋತ್ತರ ಪದವಿಯಾದ ಅಂಕಿ-ಅಂಶ ಮತ್ತು ಗಣಕಯಂತ್ರ ವಿಜ್ಞಾನ ವಿಷಯದಲ್ಲಿ ಉತ್ತೀರ್ಣರಾಗಿರಬೇಕು.

ಹುದ್ದೆಯ ವಿಧ : ಅಭ್ಯರ್ಥಿಗಳನ್ನು ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.

ಉದ್ಯೋಗ ಮಾಹಿತಿ : ಎಸ್.ಡಿ.ಎ, ಎಫ್.ಡಿ.ಎ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ಅಭ್ಯರ್ಥಿಗಳ ವಯಸ್ಸು 45 ವರ್ಷ ಮೀರಿರಬಾರದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,000 ರಿಂದ 30,000 ಸಂಭಾವನೆ ನೀಡಲಾಗುತ್ತದೆ.

ಅನುಭವ : ಕನಿಷ್ಠ 3 ವರ್ಷ ಕೆಲಸ ನಿರ್ವಹಿಸಿದ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಪ್ರಕಟಣೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯವಿರುವ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು ಅಥವಾ ಇ-ಮೇಲ್ ಗೆ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಕಾರ್ಯಪಾಲಕ ಇಂಜಿನಿಯರ್ ಕಛೇರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಜಿಲ್ಲಾಡಳಿತ ಭವನ, ಚಪ್ಪರದಕಲ್ಲು (ಬೀರಸಂದ್ರ), ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ.

ನಿಗದಿತ ಅರ್ಜಿ ಶುಲ್ಕದ ವಿವರ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 12, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 20, 2023

RDWSD Karnataka Recruitment 2023 : Important Links

ಪ್ರಕಟಣೆCLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment