REPCO Bank Recruitment 2022 : ರೆಪ್ಕೊ ಬ್ಯಾಂಕಿನಲ್ಲಿ ಖಾಲಿಯಿರುವ ಕಿರಿಯ ಸಹಾಯಕ/ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
REPCO Bank Recruitment 2022 : Details of Vacancies
ಹುದ್ದೆ : ಕಿರಿಯ ಸಹಾಯಕ/ ಕ್ಲರ್ಕ್
ಕರ್ತವ್ಯ ಸ್ಥಳ : ಕರ್ನಾಟಕ, ಕೇರಳ, ತಮಿಳುನಾಡು, ಪಾಂಡಿಚೇರಿ ಮತ್ತು ಆಂಧ್ರ ಪ್ರದೇಶ ರಾಜ್ಯಗಳಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 50 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ | ಹುದ್ದೆಗಳ ಸಂಖ್ಯೆ |
ಕರ್ನಾಟಕ | 4 |
ತಮಿಳುನಾಡು & ಪಾಂಡಿಚೇರಿ | 40 |
ಆಂಧ್ರ ಪ್ರದೇಶ | 4 |
ಕೇರಳ | 2 |
ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆಯ ಜೊತೆಗೆ ಅಭ್ಯರ್ಥಿಯು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಾನ : ದಿನಾಂಕ 30/09/2022ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 28 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ ಸಡಿಲಿಕೆ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ ಸಡಿಲಿಕೆ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ ಸಡಿಲಿಕೆ
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,900 ರಿಂದ ರೂ. 47,920 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022
ಆಯ್ಕೆ ವಿಧಾನ : ಆನ್‌ಲೈನ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳಿಗೆ ಸಂದರ್ಶನ ಇರುವುದಿಲ್ಲ. ಆನ್‌ಲೈನ್ ಪರೀಕ್ಷಾ ಮಾದರಿ ಅಧಿಸೂಚನೆಯಲ್ಲಿ ನೀಡಲಾಗಿದೆ.
ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಚೆನೈ, ಕೊಯಂಬತ್ತೂರು, ಮದುರೈ, ತಿರುಚ್ಚಿ, ಸೇಲಂ, ತಿರುನೆಲ್ವೇಲಿ, ತ್ರಿವೇಂದ್ರಮ್, ವಿಜಯವಾಡ, ವೈಜಾಗ್.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಬ್ಯಾಂಕಿನ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 500
• ಸಾಮಾನ್ಯ, ಇತರೆ ಅಭ್ಯರ್ಥಿಗಳು – ರೂ. 900
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 05, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 25, 2022
ಆನ್‌ಲೈನ್ ಪರೀಕ್ಷಾ ದಿನಾಂಕ : ಡಿಸೆಂಬರ್ ಕೊನೆಯ ವಾರ/ ಜನವರಿ ಮೊದಲನೇ ವಾರ
REPCO Bank Recruitment 2022 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
Super information ನನಿಗೆ ತುಂಬಾ ಇಷ್ಟ ವಾಯಿತು