RGPR Fellowship Karnataka Recruitment 2024 : ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ ಸ್ಥಳೀಯ ಆಡಳಿತವನ್ನು ಬಲಪಡಿಸುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಸ್ಥಾಪಿಸಿದ್ದು, ರಾಜ್ಯದ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ 51 ತಾಲೂಕುಗಳಲ್ಲಿ ಪ್ರತಿ ತಾಲೂಕಿಗೆ ಒಬ್ಬರಂತೆ ಫೆಲೋಗಳನ್ನು ಎರಡು ವರ್ಷಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
RGPR Fellowship Karnataka Recruitment 2024 : Details of Vacancies
ಹುದ್ದೆ : ಫೆಲೋ (ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 51 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. (ಕಲ್ಯಾಣ ಕರ್ನಾಟಕ ಜಿಲ್ಲೆಗಳ ಪ್ರತಿ ತಾಲೂಕಿಗೆ ಒಬ್ಬರಂತೆ ಒಟ್ಟು 51 ಫೆಲೋಗಳ ನೇಮಕಾತಿ)
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಸಾಮಾಜಿಕ ವಿಜ್ಞಾನಗಳಾದ ಸಮಾಜಶಾಸ್ತ್ರ ಅಥವಾ ಅರ್ಥಶಾಸ್ತ್ರ ಅಥವಾ ಗ್ರಾಮೀಣಾಭಿವೃದ್ಧಿ ಅಥವಾ ಸಮಾಜ ಕಾರ್ಯ ಅಥವಾ ಸಾರ್ವಜನಿಕ ನೀತಿ ವಿಷಯಗಳಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಕನ್ನಡ ಭಾಷಾಜ್ಞಾನ ಕಡ್ಡಾಯ. 1-2 ವರ್ಷಗಳ ಕ್ಷೇತ್ರ ಅನುಭವ ಹೊಂದಿರುವ ಪದವೀಧರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024
ವಯೋಮಾನ : ಅಭ್ಯರ್ಥಿಗಳ ವಯಸ್ಸು 32 ವರ್ಷಕ್ಕಿಂತ ಕಡಿಮೆ ಇರಬೇಕು.
ಸಂಭಾವನೆ : ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಯಾಣ ಭತ್ಯೆ ಸೇರಿ ತಿಂಗಳಿಗೆ ರೂ. 61,500 ನೀಡಲಾಗುವುದು.
ಕಾರ್ಯಾವಧಿ : ಎರಡು ವರ್ಷಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು.
ಆಯ್ಕೆ ವಿಧಾನ : ಫೆಲೋಗಳನ್ನು ಅರ್ಹತೆಯ ಆಧಾರದ ಮೇಲೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ರೈಲ್ವೆಯಲ್ಲಿ ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿ 2024
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಪ್ರಕಟಣೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 22, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 05, 2024
Rajiv Gandhi Panchayat Raj Fellowship Karnataka Recruitment 2024 : Important Links
ಪ್ರಕಟಣೆ | CLICK HERE |
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Channel Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.