ಭಾರತೀಯ ರೈಲ್ವೆಯಲ್ಲಿ ಅಸಿಸ್ಟಂಟ್ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿ 2024 – RRB Assistant Loco Pilot ALP Recruitment 2024

RRB Assistant Loco Pilot ALP Recruitment 2024 : ರೈಲ್ವೆ ನೇಮಕಾತಿ ಮಂಡಳಿಯು (RRB) ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಅಸಿಸ್ಟಂಟ್ ಲೋಕೋ ಪೈಲಟ್ (ALP) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RRB Assistant Loco Pilot ALP Recruitment 2024 : Details of Vacancies

ಹುದ್ದೆ : ಅಸಿಸ್ಟಂಟ್ ಲೋಕೋ ಪೈಲಟ್ (ALP)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 5696 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಎಸ್.ಎಸ್.ಎಲ್.ಸಿ ಜೊತೆಗೆ ಫಿಟ್ಟರ್, ಇಲೆಕ್ಟ್ರೀಷಿಯನ್, ಇನ್ಟ್ರುಮೆಂಟ್ ಮೆಕ್ಯಾನಿಕ್, ಮಿಲ್ ವ್ರೈಟ್, ಮೆಂಟೆನೆನ್ಸ್ ಮೆಕ್ಯಾನಿಕ್, ಮೆಕ್ಯಾನಿಕ್ (ರೇಡಿಯೋ & ಟಿವಿ), ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಮೆಕ್ಯಾನಿಕ್ (ಮೋಟಾರ್ ವೆಹಿಕಲ್), ವಯರ್ ಮ್ಯಾನ್, ಟ್ರ್ಯಾಕ್ಟರ್ ಮೆಕ್ಯಾನಿಕ್, ಆರ್ಮೇಚರ್ & ಕಾಯಿಲ್ ವಿಂಡರ್, ಮೆಕ್ಯಾನಿಕ್ (ಡಿಸೇಲ್), ಹೀಟ್ ಇಂಜಿನ್, ಟರ್ನರ್, ಮಶಿನಿಸ್ಟ್, ರೆಫ್ರಿಜಿರೇಷನ್ & ಏರ್ ಕಂಡೀಷನಿಂಗ್ ಟ್ರೇಡಗಳಲ್ಲಿ ಐಟಿಐ ಅಥವಾ ಎಸ್.ಎಸ್.ಎಲ್.ಸಿ ಜೊತೆಗೆ ಮೇಲಿನ ಟ್ರೇಡಗಳಲ್ಲಿ ಅಪ್ರೆಂಟಿಸಶಿಪ್ ಅಥವಾ ಎಸ್.ಎಸ್.ಎಲ್.ಸಿ ಜೊತೆಗೆ ಡಿಪ್ಲೊಮಾ ಇನ್ ಮೆಕ್ಯಾನಿಕಲ್, ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್, ಆಟೋಮೊಬೈಲ್ ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಡಿಸಿಸಿ ಬ್ಯಾಂಕ್ ನೇಮಕಾತಿ 2024

ವಯೋಮಿತಿ : ದಿನಾಂಕ 01 ಜುಲೈ 2024ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 33 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,900 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕಂಪ್ಯೂಟರ್ ಬೇಸ್ಡ್‌ ಆಪ್ಟಿಟ್ಯೂಡ್ ಟೆಸ್ಟ್‌, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಮಹಿಳೆ, ಟ್ರ್ಯಾನ್ಸ್ಜೆಂಡರ್, ಅಲ್ಪಸಂಖ್ಯಾತ – ರೂ. 250
• ಉಳಿದ ಅಭ್ಯರ್ಥಿಗಳು – ರೂ. 500

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜನವರಿ 20, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಫೆಬ್ರವರಿ 19, 2024
ಅರ್ಜಿ ತಿದ್ದುಪಡಿ ಮಾಡುವ ದಿನಾಂಕ : ಫೆಬ್ರವರಿ 20, 2024 ರಿಂದ ಫೆಬ್ರವರಿ 29, 2024

RRB ALP Recruitment 2024 : Important Links

AGE LIMIT NOTICECLICK HERE
NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment