ಭಾರತೀಯ ರೈಲ್ವೆಯಲ್ಲಿ ಬೃಹತ್ ನೇಮಕಾತಿ 2026 – RRB Group D Recruitment 2026

RRB Group D Recruitment 2026

RRB Group D Recruitment 2026 : ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಅಸಿಸ್ಟಂಟ್, ಟ್ರ್ಯಾಕ್ ಮೆಂಟೇನರ್, ಪೋಸ್ಟ್ ಮನ್ ಸೇರಿದಂತೆ ವಿವಿಧ ಗ್ರೂಪ್-ಡಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RRB Group D Recruitment 2026 : Details of Vacancies

ಹುದ್ದೆ :

ಅಸಿಸ್ಟಂಟ್ ಟಿ.ಆರ್.ಡಿ, ಅಸಿಸ್ಟಂಟ್ ಆಪರೇಷನ್ಸ್ (ಇಲೆಕ್ಟ್ರಿಕಲ್), ಅಸಿಸ್ಟಂಟ್ ಟಿಎಲ್ & ಎಸಿ, ಅಸಿಸ್ಟಂಟ್ (ಸಿಗ್ನಲ್ & ಟೆಲಿಕಮ್ಯುನಿಕೇಷನ್), ಪೊಸ್ಟ್ ಮನ್ ಬಿ, ಅಸಿಸ್ಟಂಟ್ ಟ್ರ್ಯಾಕ್ ಮಶಿನ್, ಟ್ರ್ಯಾಕ್ ಮೆಂಟೇನರ್-IV, ಅಸಿಸ್ಟಂಟ್ ಬ್ರಿಡ್ಜ್, ಅಸಿಸ್ಟಂಟ್ ಕ್ಯಾರೇಜ್ ಮತ್ತು ವ್ಯಾಗನ್, ಅಸಿಸ್ಟಂಟ್ ಲೋಕೋ ಶೇಡ್ ( ಇಲೆಕ್ಟ್ರಿಕಲ್), ಅಸಿಸ್ಟಂಟ್ ಪಿ. ವೇ.

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 21997 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

10ನೇ ತರಗತಿ, ಐಟಿಐ ಅಥವಾ ತತ್ಸಮಾನ ಅಥವಾ ನ್ಯಾಷನಲ್ ಅಪ್ರೆಂಟಿಸ್ ಶಿಪ್ ಸರ್ಟಿಫಿಕೇಟ್ (ಎನ್.ಎ.ಸಿ) ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಅಂಚೆ ಇಲಾಖೆ ನೇಮಕಾತಿ 2026

ವಯೋಮಾನ :

ದಿನಾಂಕ 01/01/2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಾನ ಹೊಂದಿರಬೇಕು.
• ಕನಿಷ್ಠ 18 ವರ್ಷ
• ಗರಿಷ್ಠ 33 ವರ್ಷ

ವಯೋಮಿತಿ ಸಡಿಲಿಕೆ :

• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,000 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

• ಕಂಪ್ಯೂಟರ್ ಆಧಾರಿತ ಪರೀಕ್ಷೆ
• ದೈಹಿಕ ಸಾಮರ್ಥ್ಯ ಪರೀಕ್ಷೆ (PET)
• ದಾಖಲೆಗಳ ಪರಿಶೀಲನೆ
• ವೈದ್ಯಕೀಯ ಪರೀಕ್ಷೆ

ಉದ್ಯೋಗ ಮಾಹಿತಿ : ಎಸ್‌ಬಿಐ ಸರ್ಕಲ್ ಬೇಸ್ಡ್‌ ಆಫೀಸರ್ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

• ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕ, ಮಹಿಳಾ, ಮಂಗಳಮುಖಿ, ಅಲ್ಪಸಂಖ್ಯಾತ, ಇಬಿಸಿ ಅಭ್ಯರ್ಥಿಗಳಿಗೆ – ರೂ. 250
• ಉಳಿದ ಅಭ್ಯರ್ಥಿಗಳಿಗೆ – ರೂ. 500

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜನವರಿ 31, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮಾರ್ಚ್ 02, 2026
• ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮಾರ್ಚ್ 04, 2026

Railway Group D Recruitment 2026 : Important Links

NOTIFICATIONCLICK HERE
APPLY ONLINECLICK HERE
Telegram Join LinkClick Here
WhatsApp Group LinkClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment