ಭಾರತೀಯ ರೈಲ್ವೆಯಲ್ಲಿ ಪದವೀಧರ ಹುದ್ದೆಗಳ ಬೃಹತ್ ನೇಮಕಾತಿ 2024 – RRB NTPC Graduate Recruitment 2024

RRB NTPC Graduate Recruitment 2024 : ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಟಿಕೆಟ್ ಸೂಪರ್ವೈಸರ್, ಸ್ಟೇಷನ್ ಮಾಸ್ಟರ್, ಟೈಪಿಸ್ಟ್ ಸೇರಿದಂತೆ ವಿವಿಧ ಪದವೀಧರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RRB NTPC Graduate Recruitment 2024 : Details of Vacancies

ಹುದ್ದೆ : ಚೀಪ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ವೈಸರ್, ಸ್ಟೇಷನ್ ಮಾಸ್ಟರ್, ಗೂಡ್ಸ್ ಟ್ರೈನ್ ಮ್ಯಾನೇಜರ್, ಜೂನಿಯರ್ ಅಕೌಂಟ್ ಅಸಿಸ್ಟಂಟ್ ಕಮ್ ಟೈಪಿಸ್ಟ್, ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 8,113 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಚೀಪ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ವೈಸರ್173635,400
ಸ್ಟೇಷನ್ ಮಾಸ್ಟರ್99435,400
ಗೂಡ್ಸ್ ಟ್ರೈನ್ ಮ್ಯಾನೇಜರ್314429,200
ಜೂನಿಯರ್ ಅಕೌಂಟ್ ಅಸಿಸ್ಟಂಟ್ ಕಮ್ ಟೈಪಿಸ್ಟ್150729,200
ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್73229,200

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಟೈಪಿಸ್ಟ್ ಹುದ್ದೆಗಳಿಗೆ ಪದವಿ ಜೊತೆಗೆ ಕಂಪ್ಯೂಟರ್ ನಲ್ಲಿ ಇಂಗ್ಲಿಷ್/ಹಿಂದಿ ಟೈಪಿಂಗ್ ಪರಿಣಿತಿ ಹೊಂದಿರಬೇಕು.

ಉದ್ಯೋಗ ಮಾಹಿತಿ : ಎಸ್‌ಎಸ್‌ಸಿ ಕಾನ್ಸ್‌ಟೇಬಲ್‌ ಹುದ್ದೆಗಳ ಬೃಹತ್ ನೇಮಕಾತಿ 2024

ವಯೋಮಾನ : ದಿನಾಂಕ 01/01/2025ಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 36 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸ್ಟೇಜ್ 1 & ಸ್ಟೇಜ್ 2), ಟೈಪಿಂಗ್ ಪರೀಕ್ಷೆ (ಟೈಪಿಸ್ಟ್ ಹುದ್ದೆಗಳಿಗೆ), ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸ್ಟೇಜ್-1) –

ಭಾರತೀಯ ರೈಲ್ವೆಯಲ್ಲಿ ಪದವೀಧರ ಹುದ್ದೆಗಳ ಬೃಹತ್ ನೇಮಕಾತಿ 2024 – RRB NTPC Graduate Recruitment 2024


ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸ್ಟೇಜ್-2) –

ಭಾರತೀಯ ರೈಲ್ವೆಯಲ್ಲಿ ಪದವೀಧರ ಹುದ್ದೆಗಳ ಬೃಹತ್ ನೇಮಕಾತಿ 2024 – RRB NTPC Graduate Recruitment 2024

ಉದ್ಯೋಗ ಮಾಹಿತಿ : ಈಸ್ಟರ್ನ್ ರೈಲ್ವೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಪಿಡಬ್ಲ್ಯೂಡಿ, ಮಹಿಳಾ, ಮಂಗಳಮುಖಿ, ಅಲ್ಪಸಂಖ್ಯಾತ, ಇಬಿಸಿ ಅಭ್ಯರ್ಥಿಗಳಿಗೆ – ರೂ. 250
• ಉಳಿದ ಅಭ್ಯರ್ಥಿಗಳಿಗೆ – ರೂ. 500

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 14, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 13, 2024 ಅಕ್ಟೋಬರ್ 20, 2024

RRB NTPC Graduate Level Recruitment 2024 : Important Links

LAST DATE EXTENDED NOTIFICATION CLICK HERE
DETAILED NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment