RRC South Western Railway Recruitment 2023 : ಸೌತ್ ವೆಸ್ಟರ್ನ್ ರೈಲ್ವೆ ಯಲ್ಲಿ ಅಗತ್ಯ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
RRC South Western Railway Recruitment 2023 – RRC Hubli Railway Recruitment : Details of Vacancies
ಹುದ್ದೆ : ಅಪ್ರೆಂಟಿಸ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಹುಬ್ಬಳ್ಳಿ, ಬೆಂಗಳೂರು ಹಾಗೂ ಮೈಸೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 904 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಡಿವಿಷನ್ | ಹುದ್ದೆಗಳ ಸಂಖ್ಯೆ |
ಹುಬ್ಬಳ್ಳಿ ಡಿವಿಷನ್ | 237 |
ಕ್ಯಾರಿಯೇಜ್ ರಿಪೇರ್ ವರ್ಕ್ಶಾಪ್, ಹುಬ್ಬಳ್ಳಿ | 217 |
ಬೆಂಗಳೂರು ಡಿವಿಷನ್ | 230 |
ಮೈಸೂರು ಡಿವಿಷನ್ | 177 |
ಸೆಂಟ್ರಲ್ ವರ್ಕ್ಶಾಪ್, ಮೈಸೂರು | 43 |
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇಕಡಾ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ ಕೋರ್ಸ್ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ವಯೋಮಾನ : ದಿನಾಂಕ 02 ಆಗಸ್ಟ್ 2023ಕ್ಕೆ ಅಭ್ಯರ್ಥಿಗಳು ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ಮಾಜಿ ಸೈನಿಕ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ಉದ್ಯೋಗ ಮಾಹಿತಿ : ವೆಸ್ಟರ್ನ್ ರೈಲ್ವೆ ನೇಮಕಾತಿ 2023
ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಇತರೆ ಮಾಹಿತಿ : ಸೌತ್ ವೆಸ್ಟರ್ನ್ ರೈಲ್ವೆ ಅಪ್ರೆಂಟಿಸ್ ಹುದ್ದೆಗಳನ್ನು ಫಿಟ್ಟರ್, ವೆಲ್ಡರ್, ಇಲೆಕ್ಟ್ರಿಷಿಯನ್, ರೆಪ್ರಿಜಿರೇಶನ್ & ಏರ್ ಕಂಡೀಷನರ್ ಮೆಕ್ಯಾನಿಕ್, ಪ್ರೋಗ್ರಾಮಿಂಗ್ & ಸಿಸ್ಟಮ್ ಅಡ್ಮಿನಿಸ್ಟ್ರೇಷನ್ ಅಸಿಸ್ಟೆಂಟ್, ಟರ್ನರ್, ಮಶಿನಿಸ್ಟ್, ಕಾರ್ಪೆಂಟರ್, ಪೇಂಟರ್, ಇಲೆಕ್ಟ್ರಿಷಿಯನ್ ಜನರಲ್, ಸ್ಟೇನೋಗ್ರಾಫರ್ ಟ್ರೇಡ್ಗಳಲ್ಲಿ ನೇಮಕ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಅಧಿಸೂಚನೆಯಲ್ಲಿ ನೀಡಲಾಗಿದೆ
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ
ಉಳಿದ ಅಭ್ಯರ್ಥಿಗಳಿಗೆ – ರೂ. 100
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 03, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 02, 2023
RRC South Western Railway Recruitment 2023 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.