ರೈಲ್ ವೀಲ್ ಫ್ಯಾಕ್ಟರಿಯಲ್ಲಿ ಅಪ್ರೆಂಟಿಸ್ ನೇಮಕಾತಿ 2026 – RWF Apprentice Recruitment 2026

RWF Apprentice Recruitment 2026

RWF Apprentice Recruitment 2026 : ರೈಲ್ ವೀಲ್ ಫ್ಯಾಕ್ಟರಿಯಲ್ಲಿ ಅಗತ್ಯ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

RWF Apprentice Recruitment 2026 : Details of Vacancies

ಹುದ್ದೆ :

ಅಪ್ರೆಂಟಿಸ್

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 192 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇಕಡಾ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ ಕೋರ್ಸ್ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಮಾಹಿತಿ : ಕೊಂಕಣ ರೈಲ್ವೆ ನೇಮಕಾತಿ 2026

ವಯೋಮಾನ :

ದಿನಾಂಕ 01 ಮಾರ್ಚ್ 2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಾನ ಹೊಂದಿರಬೇಕು.
• ಕನಿಷ್ಠ 15 ವರ್ಷ
• ಗರಿಷ್ಠ 24 ವರ್ಷ

ವಯೋಮಿತಿ ಸಡಿಲಿಕೆ :

• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ

ಸ್ಟೈಫಂಡ್ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 10,899 ರಿಂದ ರೂ. 12,261 ಸ್ಟೈಫಂಡ್ ನೀಡಲಾಗುತ್ತದೆ.

ಆಯ್ಕೆ ವಿಧಾನ :

ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಇತರೆ ಮಾಹಿತಿ :

ರೈಲ್ ವೀಲ್ ಫ್ಯಾಕ್ಟರಿ ಅಪ್ರೆಂಟಿಸ್ ಹುದ್ದೆಗಳನ್ನು ಫಿಟ್ಟರ್, ಮಶಿನಿಸ್ಟ್, ಮೆಕ್ಯಾನಿಕ್ (ಮೋಟಾರ್ ವೆಹಿಕಲ್), ಟರ್ನರ್, ಸಿ.ಎನ್.ಸಿ ಪ್ರೊಗ್ರಾಮಿಂಗ್ ಕಂ ಆಪರೇಟರ್, ಇಲೆಕ್ಟ್ರಿಷಿಯನ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್ ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನ ಅಧಿಸೂಚನೆಯಲ್ಲಿ ನೀಡಲಾಗಿದೆ

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ :

The Assistant Personnel Officer, Personnel Department, Rail Wheel Factory, Yelahanka, Bangalore – 560064

ನಿಗದಿತ ಅರ್ಜಿ ಶುಲ್ಕದ ವಿವರ :

• ಎಸ್ಸಿ, ಎಸ್ಟಿ, ಮಹಿಳಾ, ಅಂಗವಿಕಲ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ
• ಉಳಿದ ಅಭ್ಯರ್ಥಿಗಳಿಗೆ – ರೂ. 100

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು Principal Financial Adviser/Rail Wheel Factory ಹೆಸರಿಗೆ ರೂ. 100 ಪೋಸ್ಟಲ್ ಆರ್ಡರ್ ಅಥವಾ ರಾಷ್ಟ್ರೀಕೃತ ಬ್ಯಾಂಕಿನ ಡಿ.ಡಿ. ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಫೆಬ್ರುವರಿ 28, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಏಪ್ರಿಲ್ 01, 2026

Rail Wheel Factory Apprentice Recruitment 2026 : Important Links

NOTIFICATION & APPLICATION FORM CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment