Sainik Welfare Department Karnataka Recruitment 2022 – Apply for 13 SDA Posts

Sainik Welfare Department Karnataka Recruitment 2022 : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿಯಿರುವ ದ್ವಿತೀಯ ದರ್ಜೆ ಸಹಾಯಕರು ‘ಸಿ’ ವೃಂದದ ಹುದ್ದೆಗಳ ಭರ್ತಿಗೆ ಅರ್ಹ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Sainik Welfare Department Karnataka Recruitment 2022 : Details of Vacancies

ಹುದ್ದೆ : ದ್ವಿತೀಯ ದರ್ಜೆ ಸಹಾಯಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 13 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಅಥವಾ 10ನೇ ತರಗತಿ ಉತ್ತೀರ್ಣರಾದ ನಂತರ ಸಶಸ್ತ್ರ ಪಡೆಗೆ ಸೇರ್ಪಡೆಗೊಂಡು ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ಸಶಸ್ತ್ರ ಪಡೆಗಳಲ್ಲಿ ಇಂಡಿಯನ್ ಆರ್ಮಿ/ ಏರ್ ಫೋರ್ಸ್/ ನೇವಿಯಿಂದ ಸ್ಪೆಷಲ್ ಸರ್ಟಿಫಿಕೇಟ್ ಪಡೆದವರಿಗೆ ಸಶಸ್ತ್ರ ಪಡೆಗಳಿಂದ ವಿತರಿಸಿದ ಪದವಿ ಪ್ರಮಾಣ ಪತ್ರ ಹೊಂದಿರಬೇಕು.

ಉದ್ಯೋಗ ಮಾಹಿತಿ : ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಹತಾ ಷರತ್ತುಗಳು : ಮಾಜಿ ಸೈನಿಕರಾಗಿರತಕ್ಕದ್ದು. ಕರ್ನಾಟಕ ರಾಜ್ಯದ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಮಾಜಿ ಸೈನಿಕರ ಗುರುತಿನ ಚೀಟಿ ಪಡೆದಿರಬೇಕು. ಎಲ್ಲಾ ಹುದ್ದೆಗಳು ಮಾಜಿ ಸೈನಿಕರಿಗೆ ಮೀಸಲಾಗಿರುತ್ತವೆ.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ 50 ವರ್ಷಗಳನ್ನು ಮೀರಿರಬಾರದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಉದ್ಯೋಗ ಮಾಹಿತಿ : ಕರ್ನಾಟಕ ಅರಣ್ಯ ಇಲಾಖೆಯಿಂದ RFO ಹುದ್ದೆಗಳ ನೇಮಕಾತಿ 2022

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು.

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರ್ಕಾರಿ ಮುದ್ರಣಾಲಯಲ್ಲಿ ಲಭ್ಯವಿರುವ ಸರ್ಕಾರದಿಂದ ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಗೆ ಅವಶ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ಕಚೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, 58, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಭವನ, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ರಸ್ತೆ, ಬೆಂಗಳೂರು ~ 560025

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 18, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 05, 2022

Sainik Welfare Department Karnataka Recruitment 2022 : Important Links

NotificationClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment