Sainik Welfare Department Karnataka Recruitment 2023 : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿಯಿರುವ ಕಲ್ಯಾಣ ಸಂಘಟಿಕರು ‘ಸಿ’ ವೃಂದದ ಹುದ್ದೆಗಳ ಭರ್ತಿಗೆ ಅರ್ಹ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Sainik Welfare Department Karnataka Recruitment 2023 : Details of Vacancies
ಹುದ್ದೆ : ಕಲ್ಯಾಣ ಸಂಘಟಿಕರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 14 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಅಥವಾ 10ನೇ ತರಗತಿ ಉತ್ತೀರ್ಣರಾದ ನಂತರ ಸಶಸ್ತ್ರ ಪಡೆಗೆ ಸೇರ್ಪಡೆಗೊಂಡು ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ಸಶಸ್ತ್ರ ಪಡೆಗಳಲ್ಲಿ ಇಂಡಿಯನ್ ಆರ್ಮಿ/ ಏರ್ ಫೋರ್ಸ್/ ನೇವಿಯಿಂದ ಸ್ಪೆಷಲ್ ಸರ್ಟಿಫಿಕೇಟ್ ಪಡೆದವರಿಗೆ ಸಶಸ್ತ್ರ ಪಡೆಗಳಿಂದ ವಿತರಿಸಿದ ಪದವಿ ಪ್ರಮಾಣ ಪತ್ರ ಹೊಂದಿರಬೇಕು.
ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023
ಅರ್ಹತಾ ಷರತ್ತುಗಳು : ಭೂಸೇನೆಯ ಜೆಸಿಒ ರ್ಯಾಂಕ್‌ನಲ್ಲಿ ಹಾಗೂ ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನವಾದ ರ್ಯಾಂಕ್‌ನಿಂದ ಬಿಡುಗಡೆ ಹೊಂದಿರುವ ಮಾಜಿ ಸೈನಿಕರಾಗಿರತಕ್ಕದ್ದು. ಕರ್ನಾಟಕ ರಾಜ್ಯದ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಮಾಜಿ ಸೈನಿಕರ ಗುರುತಿನ ಚೀಟಿ ಪಡೆದಿರಬೇಕು. ಎಲ್ಲಾ ಹುದ್ದೆಗಳು ಮಾಜಿ ಸೈನಿಕರಿಗೆ ಮೀಸಲಾಗಿರುತ್ತವೆ.
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ 50 ವರ್ಷಗಳನ್ನು ಮೀರಿರಬಾರದು.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಉದ್ಯೋಗ ಮಾಹಿತಿ : ವಾರ್ಡನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಸರ್ಕಾರಿ ಮುದ್ರಣಾಲಯಲ್ಲಿ ಲಭ್ಯವಿರುವ ಸರ್ಕಾರದಿಂದ ನಿಗದಿಪಡಿಸಿದ ಅರ್ಜಿ ನಮೂನೆ-1ನ್ನು ಪಡೆದುಕೊಳ್ಳಬೇಕು.
ಹಂತ 3 : ಅರ್ಜಿ ನಮೂನೆಯಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅರ್ಜಿ ನಮೂನೆಯಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, #58, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಭವನ, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ರಸ್ತೆ, ಬೆಂಗಳೂರು – 560025
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 18, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 06, 2023
Sainik Welfare Department Karnataka Recruitment 2023 : Important Links
NOTIFICATION | CLICK HERE |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.