SBI CBO Recruitment 2021 – Apply Now 1226 Posts

SBI CBO Recruitment 2021 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಸರ್ಕಲ್ ಬೇಸ್ಡ್‌ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SBI CBO Recruitment 2021 : Details of Vacancies

ಹುದ್ದೆ : ಸರ್ಕಲ್ ಬೇಸ್ಡ್‌ ಆಫೀಸರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1226 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 278 ಹುದ್ದೆಗಳು ಖಾಲಿ ಇದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಅನುಭವ : ಬ್ಯಾಂಕಿನಲ್ಲಿ ಅಧಿಕಾರಿಯಾಗಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 30 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗ ಮಾಹಿತಿ : ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಆದೇಶ ಜಾರಿಕಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 36,000 ರಿಂದ ರೂ. 63,840 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ. ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು ರೂ. 750 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 09, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 29, 2021

SBI CBO Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment