SBI CBO Recruitment 2022 – Apply Online for 1422 Posts

SBI CBO Recruitment 2022 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಸರ್ಕಲ್ ಬೇಸ್ಡ್‌ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SBI CBO Recruitment 2022 : Details of Vacancies

ಹುದ್ದೆ : ಸರ್ಕಲ್ ಬೇಸ್ಡ್‌ ಆಫೀಸರ್ (CBO)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1422 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಅನುಭವ : ಆರ್‌ಬಿಐನ ಎರಡನೇ ಶೆಡ್ಯೂಲ್‌ನಲ್ಲಿ ಪಟ್ಟಿ ಮಾಡಿರುವಂತೆ ಯಾವುದೇ ನಿಗದಿತ ವಾಣಿಜ್ಯ ಬ್ಯಾಂಕ್ ಅಥವಾ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ನಲ್ಲಿ ಅಧಿಕಾರಿಯಾಗಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.

ವಯೋಮಾನ : ದಿನಾಂಕ 30/09/2022ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 30 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಉದ್ಯೋಗ ಮಾಹಿತಿ : KMF ನೇಮಕಾತಿ 2022

ವಯೋಮಿತಿ ಸಡಿಲಿಕೆ :
• ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 36,000 ರಿಂದ ರೂ. 63,840 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ. ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು ರೂ. 750 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 18, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 07, 2022

SBI CBO Recruitment 2022 : Important Links

NotificationClick Here
Apply Online Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment