ಎಸ್‌ಬಿಐ ಜೂನಿಯರ್ ಅಸೋಸಿಯೇಟ್ಸ್ ನೇಮಕಾತಿ 2023 – SBI Junior Associates Recruitment 2023

SBI Junior Associates Recruitment 2023 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SBI Junior Associates Recruitment 2023 : Details of Vacancies

ಹುದ್ದೆ : ಜೂನಿಯರ್ ಅಸೋಸಿಯೇಟ್ಸ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 8283 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 450 ಹುದ್ದೆಗಳು ಖಾಲಿ ಇದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. (ಪದವಿಯ ಅಂತಿಮ ವರ್ಷ/ಸೆಮಿಸ್ಟರ್‌ನಲ್ಲಿರುವ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. ಆದರೆ ಸಂದರ್ಶನ/ ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಅವರು 31-12-2023 ರಂದು ಅಥವಾ ಅದಕ್ಕೂ ಮೊದಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುರಾವೆಯನ್ನು ಒದಗಿಸಬೇಕು)

ವಯಸ್ಸಿನ ಮೀತಿ : ದಿನಾಂಕ 01/04/2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 20 ಹಾಗೂ ಗರಿಷ್ಠ 28 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ಆದೇಶ ಜಾರಿಕಾರರು ಮತ್ತು ಜವಾನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,900 ರಿಂದ ರೂ. 47,920 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕೊಂಕಣ ರೈಲ್ವೆ ನೇಮಕಾತಿ 2023

ಪರೀಕ್ಷಾ ಕೇಂದ್ರಗಳು : ಬಳ್ಳಾರಿ, ಬೆಂಗಳೂರು, ಬೆಳಗಾವಿ, ದಾವಣಗೆರೆ, ಕಲಬುರಗಿ, ಹಾಸನ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :
• ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು – ರೂ. 750
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 17, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 07, 2023

SBI Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment