
SBI Junior Associates Recruitment 2026 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
SBI Junior Associates Recruitment 2026 : Details of Vacancies
ಹುದ್ದೆ :
ಜೂನಿಯರ್ ಅಸೋಸಿಯೇಟ್ಸ್ (ಕಸ್ಟಮರ್ ಸಪೋರ್ಟ್ & ಸೇಲ್ಸ್)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 1538 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 120 ಹುದ್ದೆಗಳು ಖಾಲಿ ಇದೆ.
ಶೈಕ್ಷಣಿಕ ವಿದ್ಯಾರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ವಿದ್ಯಾರ್ಹತೆ ಹೊಂದಿರಬೇಕು. (ಪದವಿಯ ಅಂತಿಮ ವರ್ಷ/ಸೆಮಿಸ್ಟರ್‌ನಲ್ಲಿರುವ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. ಆದರೆ ಆಯ್ಕೆ ಸಂದರ್ಭದಲ್ಲಿ ಅವರು 31-12-2026 ರಂದು ಅಥವಾ ಅದಕ್ಕೂ ಮೊದಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುರಾವೆಯನ್ನು ಒದಗಿಸಬೇಕು)
ಉದ್ಯೋಗ ಮಾಹಿತಿ : ಇಂಡಿಯನ್ ಓವರ್ಸೀಸ್ ಬ್ಯಾಂಕ್ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ನೇಮಕಾತಿ 2026
ವಯೋಮಾನ :
ದಿನಾಂಕ 01/04/2026ಕ್ಕೆ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 28 ವರ್ಷ ವಯೋಮಾನ ಮೀರಿರಬಾರದು.
ವಯೋಮಿತಿ ಸಡಿಲಿಕೆ :
- ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
- ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
- ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ
- ಪಿಡಬ್ಲ್ಯೂಬಿಡಿ (ಎಸ್ಸಿ/ ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 24,050 ರಿಂದ ರೂ. 64,480 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
- ಪ್ರಿಲಿಮಿನರಿ ಪರೀಕ್ಷೆ
- ಮುಖ್ಯ ಪರೀಕ್ಷೆ
- ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆ (ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ರಾಜ್ಯದ ಯಾವುದೇ ನಿರ್ದಿಷ್ಟ ಸ್ಥಳೀಯ ಭಾಷೆಯನ್ನು ವ್ಯಾಸಾಂಗ (10ನೇ ತರಗತಿ ಅಥವಾ 12ನೇ ತರಗತಿ) ಮಾಡಿರದಿದ್ದರೆ, ಅಂತಹ ಅಭ್ಯರ್ಥಿಗಳು ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆಗೆ ಹಾಜರಾಗಬೇಕು)
ಪ್ರಿಲಿಮಿನರಿ ಪರೀಕ್ಷಾ ಮಾದರಿ –
| Name of Test | No. of Questions | Maximum Marks | Duration |
| English Language | 30 | 30 | 20 min. |
| Numerical Ability | 35 | 35 | 20 Min. |
| Reasoning Ability | 35 | 35 | 20 Min. |
| Total | 100 | 100 | 1 Hour |
ಮುಖ್ಯ ಪರೀಕ್ಷಾ ಮಾದರಿ :
| Name of Test | No. of Questions | Maximum Marks | Duration |
| General/ Financial Awareness | 50 | 50 | 35 Min. |
| General English | 40 | 40 | 35 Min. |
| Quantitative Aptitude | 50 | 50 | 45 Min. |
| Reasoning Ability & Computer Aptitude | 50 | 60 | 45 Min. |
| Total | 190 | 200 | 2 Hr. 40 Min. |
ಪರೀಕ್ಷಾ ಕೇಂದ್ರಗಳು :
ಬೆಂಗಳೂರು, ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ/ಧಾರವಾಡ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ.
ಉದ್ಯೋಗ ಮಾಹಿತಿ : ಕೆಇಎಯಿಂದ ನರ್ಸಿಂಗ್ ಮತ್ತು ಫಾರ್ಮಸಿ ಆಫೀಸರ್ ಹುದ್ದೆಗಳ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ :
- ಪ.ಜಾತಿ/ ಪ.ಪಂ./ ಪಿಡಬ್ಲ್ಯೂಬಿಡಿ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
- ಒಬಿಸಿ ಅಭ್ಯರ್ಥಿಗಳು – ರೂ. 750
ಶುಲ್ಕ ಪಾವತಿಸುವ ವಿಧಾನ :
ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 07, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 27, 2026
SBI Junior Associates Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.