SBI PO Recruitment 2025 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಪ್ರೊಬೇಷನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
SBI PO Recruitment 2025 : Details of Vacancies
ಹುದ್ದೆ : ಪ್ರೊಬೇಷನರಿ ಆಫೀಸರ್ (PO)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 600 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ರೆಗ್ಯುಲರ್ | 586 |
ಬ್ಯಾಕ್ ಲಾಗ್ | 14 |
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. (ಪದವಿಯ ಅಂತಿಮ ವರ್ಷ/ಸೆಮಿಸ್ಟರ್‌ನಲ್ಲಿರುವ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. ಆದರೆ ಸಂದರ್ಶನ ಸಂದರ್ಭದಲ್ಲಿ ಅವರು 30-04-2025 ರಂದು ಅಥವಾ ಅದಕ್ಕೂ ಮೊದಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುರಾವೆಯನ್ನು ಒದಗಿಸಬೇಕು)
ಉದ್ಯೋಗ ಮಾಹಿತಿ : ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ 2025
ವಯೋಮಾನ : ದಿನಾಂಕ 01/04/2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 30 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
• ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 48,480 ರಿಂದ ರೂ. 85,920 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸೈಕೋಮೆಟ್ರಿಕ್ ಟೆಸ್ಟ್ , ಗ್ರೂಪ್ ಎಕ್ಸರ್ಸೈಜ್, ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಪ್ರಿಲಿಮಿನರಿ ಪರೀಕ್ಷಾ ಕೇಂದ್ರಗಳು : ಬೆಳಗಾವಿ, ಬೆಂಗಳೂರು, ಧಾರವಾಡ/ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ.
ಮುಖ್ಯ ಪರೀಕ್ಷಾ ಕೇಂದ್ರಗಳು : ಬೆಂಗಳೂರು
ಪ್ರಿಲಿಮಿನರಿ ಪರೀಕ್ಷಾ ಮಾದರಿ :
ಮುಖ್ಯ ಪರೀಕ್ಷಾ ಮಾದರಿ :
ಉದ್ಯೋಗ ಮಾಹಿತಿ : ಕೊಡಗು ಡಿಸಿಸಿ ಬ್ಯಾಂಕ್ ನೇಮಕಾತಿ 2025
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ :
• ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು – ರೂ. 750
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಪಾವತಿಸಬಹುದು
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 27, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 16, 2025
ಪ್ರಿಲಿಮಿನರಿ ಪರೀಕ್ಷಾ ದಿನಾಂಕ : ಮಾರ್ಚ್ 8 & 15, 2025
ಮುಖ್ಯ ಪರೀಕ್ಷಾ ದಿನಾಂಕ : ಮೇ/ಜೂನ್, 2025
SBI PO Recruitment 2025 : Important Links
NOTIFICATION | CLICK HERE |
APPLY ONLINE | CLICK HERE ಡಿಸೆಂಬರ್ 27 ರಿಂದ ಪ್ರಾರಂಭ |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.