ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇಮಕಾತಿ 2023 – SCDCC Bank Recruitment 2023 Apply Online at scdccbank.com

SCDCC Bank Recruitment 2023 : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ, ಮಂಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SCDCC Bank Recruitment 2023 : Details of Vacancies

ಹುದ್ದೆ : ಕಂಪ್ಯೂಟರ್ ಪ್ರೋಗ್ರಾಮರ್, ದ್ವಿತೀಯ ದರ್ಜೆ ಗುಮಾಸ್ತರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 125 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಕಂಪ್ಯೂಟರ್ ಪ್ರೋಗ್ರಾಮರ್236985-89608
ದ್ವಿತೀಯ ದರ್ಜೆ ಗುಮಾಸ್ತರು12324910-55655

ಶೈಕ್ಷಣಿಕ ಅರ್ಹತೆ :
ಕಂಪ್ಯೂಟರ್ ಪ್ರೋಗ್ರಾಮರ್ – ಮಾನ್ಯತೆ ಪಡೆದ ಕರ್ನಾಟಕ ರಾಜ್ಯದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಖಾಯಂ ತರಗತಿಗೆ ಹಾಜರಾಗಿ ಎಂ.ಸಿ.ಎ. ಸ್ನಾತಕೋತ್ತರ ಪದವಿ ಅಥವಾ ಕಂಪ್ಯೂಟರ್ ಶಿಕ್ಷಣದಲ್ಲಿ ಬಿ.ಇ. ಪದವಿ ಅಥವಾ ಕಂಪ್ಯೂಟರ್ ಶಿಕ್ಷಣದಲ್ಲಿ ಎಂ.ಎಸ್ಸಿ. ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು 50%ಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿರಬೇಕು. ಜೊತೆಗೆ ಹುದ್ದೆಗೆ ನಿಗದಿಪಡಿಸಿದ ಅನುಭವ ಹೊಂದಿರಬೇಕು.

ದ್ವಿತೀಯ ದರ್ಜೆ ಗುಮಾಸ್ತರು – ಪದವಿ ಪರೀಕ್ಷೆಯಲ್ಲಿ (ಎಲ್ಲಾ ಮೂರು ವರ್ಷಗಳು ಸೇರಿ) ಕನಿಷ್ಟ 50% ಹಾಗೂ ಮೇಲ್ಪಟ್ಟು ಅಂಕ ಗಳಿಸಿರಬೇಕು. ಅಥವಾ
ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಪರೀಕ್ಷೆಯಲ್ಲಿ (ಎಲ್ಲಾ ಮೂರು ವರ್ಷಗಳು ಸೇರಿ) ಕನಿಷ್ಟ 45% ಹಾಗೂ ಮೇಲ್ಪಟ್ಟು ಅಂಕ ಗಳಿಸಿರಬೇಕು. ಮತ್ತು
ಕಂಪ್ಯೂಟರ್ ಅಪರೇಶನ್ ಮತ್ತು ಅಪ್ಲಿಕೇಶನ್ ಜ್ಞಾನದೊಂದಿಗೆ ಕನಿಷ್ಟ 6 ತಿಂಗಳ ಅವಧಿಯ ಕಂಪ್ಯೂಟರ್ ಡಿಪ್ಲೋಮ್ ಅಥವಾ 6 ತಿಂಗಳ ಅವಧಿಯ ಯಾವುದೇ ಕಂಪ್ಯೂಟರ್ ತರಬೇತಿ ಪಡೆದ ಸರ್ಟಿಫಿಕೇಟ್ ಹೊಂದಿರಬೇಕು. ಆದರೆ ಪದವಿ ತರಗತಿಯಲ್ಲಿ ಕಂಪ್ಯೂಟರ್ ಸೈನ್ಸ್ ಪಠ್ಯ ಹೊಂದಿದವರಿಗೆ ಈ ಷರತ್ತಿನಿಂದ ವಿನಾಯಿತಿ ಇರುವುದು.

ಉದ್ಯೋಗ ಮಾಹಿತಿ : KPSCಯಿಂದ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ದಿನಾಂಕ 20/09/2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ
• ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಇತರೆ ಹಿಂದುಳಿದ ಜಾತಿ ಮತ್ತು ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಇತರೆ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ

ಆಯ್ಕೆ ವಿಧಾನ : ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ, ಆನ್‌ಲೈನ್‌ ಅರ್ಜಿಯ ಪ್ರತಿಯನ್ನು ಕಛೇರಿಯ ವಿಳಾಸಕ್ಕೆ ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ ನಂತರ ಅದರ ಪ್ರಿಂಟ್ ತೆಗೆದುಕೊಳ್ಳಬೇಕು.
ಹಂತ 4 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ ತಗೆದುಕೊಂಡಿರುವ ಪ್ರತಿಗೆ ತಮ್ಮ ಇತ್ತೀಚಿನ ಭಾವಚಿತ್ರ ಲಗತ್ತಿಸಿ, ಅಗತ್ಯವಿರುವ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಬೇಕು.
ಹಂತ 5 : ಕೊನೆಯದಾಗಿ, ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಿ, ಅರ್ಜಿಯನ್ನು ಈ ಕೆಳಗಿನ ಕಛೇರಿಯ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ, ಕೊಡಿಯಾಲ್ ಬೈಲು, ಮಂಗಳೂರು – 575003

ನಿಗದಿತ ಅರ್ಜಿ ಶುಲ್ಕದ ವಿವರ :
• ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು – ರೂ. 590
• ಇತರೆ ವರ್ಗದ ಅಭ್ಯರ್ಥಿಗಳು – ರೂ. 1180

ಶುಲ್ಕ ಪಾವತಿಸುವ ವಿಧಾನ : ಅರ್ಜಿ ಶುಲ್ಕವನ್ನು ಈ ಬ್ಯಾಂಕಿನ ಯಾವುದೇ ಶಾಖೆಯಲ್ಲಿ ನಗದು ಪಾವತಿ ರಶೀದಿ ಮೂಲಕ ಅಥವಾ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ, ಮಂಗಳೂರು ಹೆಸರಿಗೆ ಪಡೆದ ಡಿಡಿ ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 28, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 20, 2023

SCDCC Bank Recruitment 2023 : Important Links

NOTIFICATIONCLICK HERE
APPLY ONLINE CLICK HERE
INSTRUCTIONSCLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment