ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇಮಕಾತಿ 2024 – SCDCC Bank Recruitment 2024

SCDCC Bank Recruitment 2024 : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

SCDCC Bank Recruitment 2024 : Details of Vacancies

ಹುದ್ದೆ : ದ್ವಿತೀಯ ದರ್ಜೆ ಗುಮಾಸ್ತರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ದಕ್ಷಿಣ ಕನ್ನಡದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 123 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇಮಕಾತಿ 2024 - SCDCC Bank Recruitment 2024

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ಕರ್ನಾಟಕ ರಾಜ್ಯದ ಅಂಗೀಕೃತ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯಲ್ಲಿ (ಎಲ್ಲಾ ಮೂರು ವರ್ಷಗಳು ಸೇರಿ) ಕನಿಷ್ಟ 50% ಹಾಗೂ ಮೇಲ್ಪಟ್ಟು ಅಂಕ ಗಳಿಸಿರಬೇಕು. ಅಥವಾ ಮಾನ್ಯತೆ ಪಡೆದ ಕರ್ನಾಟಕ ರಾಜ್ಯದ ಅಂಗೀಕೃತ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಪರೀಕ್ಷೆಯಲ್ಲಿ (ಎಲ್ಲಾ ಮೂರು ವರ್ಷಗಳು ಸೇರಿ) ಕನಿಷ್ಟ 45% ಹಾಗೂ ಮೇಲ್ಪಟ್ಟು ಅಂಕ ಗಳಿಸಿರಬೇಕು. ಮತ್ತು ಕಂಪ್ಯೂಟರ್ ಅಪರೇಶನ್ ಮತ್ತು ಅಪ್ಲಿಕೇಶನ್ ಜ್ಞಾನದೊಂದಿಗೆ ಕನಿಷ್ಟ 6 ತಿಂಗಳ ಅವಧಿಯ ಕಂಪ್ಯೂಟರ್ ಡಿಪ್ಲೋಮ ಅಥವಾ 6 ತಿಂಗಳ ಅವಧಿಯ ಯಾವುದೇ ಕಂಪ್ಯೂಟರ್ ತರಬೇತಿ ಪಡೆದ ಸರ್ಟಿಫಿಕೇಟ್ ಹೊಂದಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಪ.ಜಾತಿ/ ಪ.ಪಂಗಡದ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಇತರೆ ಹಿಂದುಳಿದ ಜಾತಿ ಮತ್ತು ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಇತರೆ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 24,910 ರಿಂದ ರೂ. 55,655 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಪ‌.ಜಾತಿ, ಪ.ಪಂಗಡದ ಅಭ್ಯರ್ಥಿಗಳು – ರೂ. 590
• ಇತರೆ ಅಭ್ಯರ್ಥಿಗಳು – ರೂ. 1180

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 01, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 18, 2024

SCDCC Bank Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ವಿ.ಸೂಚನೆ : ಈಗಾಗಲೇ ದಿನಾಂಕ 07-08-2023ರ ಪ್ರಕಟಣೆಯ ಮೂಲಕ ಆಹ್ವಾನಿಸಲಾಗಿರುವ ಅರ್ಜಿಗಳಲ್ಲಿ ಲಿಖಿತ ಪರೀಕ್ಷೆಗೆ ಅರ್ಹವಾಗಿರುವ ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಅರ್ಹ/ ಅನರ್ಹರೇ ಹಾಗೂ ಯಾವ ಕಾರಣದಿಂದ ಅನರ್ಹರೆಂದು ಬ್ಯಾಂಕಿನ ವೆಬ್‌ಸೈಟ್‌ನಲ್ಲಿ ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಪರಿಶೀಲಿಸಬಹುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment