Shimoga DCC Bank Recruitment 2022 – Apply for 98 Junior Assistant and Various Posts

Shimoga DCC Bank Recruitment 2022 : ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಶಿವಮೊಗ್ಗದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Shimoga DCC Bank Recruitment 2022 : Details of Vacancies

ಹುದ್ದೆ : ಆಪ್ತ ಸಹಾಯಕರು/ ಶೀಘ್ರಲಿಪಿಗಾರರು, ಕಿರಿಯ ಸಹಾಯಕರು/ಕ್ಷೇತ್ರಾಧಿಕಾರಿಗಳು/ನಗದು ಗುಮಾಸ್ತರು, ವಾಹನ ಚಾಲಕರು, ಅಟೆಂಡರ್ ಹಾಗೂ ಜಲಗಾರರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 98 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಆಪ್ತ ಸಹಾಯಕರು133450-62600
ಕಿರಿಯ ಸಹಾಯಕರು7330350-58250
ವಾಹನ ಚಾಲಕರು127650-52650
ಅಟೆಂಡರ್2223500-47650
ಜಲಗಾರರು117000-28950

ಶೈಕ್ಷಣಿಕ ಅರ್ಹತೆ :

ಆಪ್ತ ಸಹಾಯಕರು/ ಶೀಘ್ರಲಿಪಿಗಾರರು ಹುದ್ದೆಗೆ ಅಂಗೀಕೃತ ವಿಶ್ವವಿದ್ಯಾನಿಲಯದ ಪದವಿ ಹೊಂದಿರಬೇಕು ಹಾಗೂ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಏರ್ಪಡಿಸುವ ಇಂಗ್ಲೀಷ್/ಕನ್ನಡ ಬೆರಳಚ್ಚು ಮತ್ತು ಶೀಘ್ರಲಿಪಿ ಪ್ರೌಢ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಕಿರಿಯ ಸಹಾಯಕರು ಹುದ್ದೆಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರಬೇಕು. ಸಹಕಾರ ವಿಷಯಗಳಲ್ಲಿ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ವಾಹನ ಚಾಲಕರು ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
ಅಟೆಂಡರ್ ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಜಲಗಾರರು ಹುದ್ದೆಗೆ ಕನ್ನಡ ಭಾಷೆಯಲ್ಲಿ 4ನೇ ತರಗತಿವರೆಗೆ ಓದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಅಧಿಸೂಚನೆಯಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅಗತ್ಯ ದಾಖಲೆಗಳೊಂದಿಗೆ ಅಂಚೆ ಮೂಲಕ ಅಥವಾ ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಮುಖ್ಯ ಕಾರ್ಯನಿರ್ವಾಹಕರು ಹಾಗೂ ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ, ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಬಾಲರಾಜ್ ಅರಸ್ ರಸ್ತೆ, ಪಿ.ಬಿ. ನಂ. 62, ಶಿವಮೊಗ್ಗ – 577201

ನಿಗದಿತ ಅರ್ಜಿ ಶುಲ್ಕದ ವಿವರ : ಸಾಮಾನ್ಯ, ಹಿಂದುಳಿದ ಅಭ್ಯರ್ಥಿಗಳು ರೂ. 900, ಪ‌.ಜಾತಿ, ಪ.ಪಂ., ಪ್ರ1, ಮಾಜಿ ಸೈನಿಕ ಅಭ್ಯರ್ಥಿಗಳು ರೂ. 450 ಶುಲ್ಕವನ್ನು ಮುಖ್ಯ ಕಾರ್ಯನಿರ್ವಾಹಕರು, ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಶಿವಮೊಗ್ಗ ಇವರ ಹೆಸರಿಗೆ ಡಿಮ್ಯಾಂಡ್ ಡ್ರಾಪ್ಟ್/ ಪೇ ಆರ್ಡರ್ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 22, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 16, 2022

Shimoga DCC Bank Recruitment 2022 : Important Links

ಅಧಿಸೂಚನೆ & ಅರ್ಜಿ ನಮೂನೆClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

1 thought on “Shimoga DCC Bank Recruitment 2022 – Apply for 98 Junior Assistant and Various Posts”

Leave a Comment